ಸುಪ್ರೀಂನಲ್ಲಿ ಬಂಧನ ಪ್ರಶ್ನಿಸಿದ್ದ ಅರ್ಜಿ ಹಿಂಪಡೆದ ಕೇಜ್ರಿವಾಲ್‌

| Published : Mar 23 2024, 01:03 AM IST / Updated: Mar 23 2024, 12:38 PM IST

ಸುಪ್ರೀಂನಲ್ಲಿ ಬಂಧನ ಪ್ರಶ್ನಿಸಿದ್ದ ಅರ್ಜಿ ಹಿಂಪಡೆದ ಕೇಜ್ರಿವಾಲ್‌
Share this Article
  • FB
  • TW
  • Linkdin
  • Email

ಸಾರಾಂಶ

ಸುಪ್ರೀಂ ಕೋರ್ಟ್‌ನಲ್ಲಿ ತಮ್ಮ ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಅರವಿಂದ್‌ ಕೇಜ್ರಿವಾಲ್‌ ಹಿಂಪಡೆದಿದ್ದಾರೆ.

ನವದೆಹಲಿ: ದಿಲ್ಲಿ ಮದ್ಯ ನೀತಿ ಹಗರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ಬಂಧನದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದಿದ್ದಾರೆ.

ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವ ಮುನ್ನ ವಿಚಾರಣಾ ನ್ಯಾಯಾಲಯಕ್ಕೂ ಕೇಜ್ರಿವಾಲ್‌ ಅರ್ಜಿ ಸಲ್ಲಿಸಿದ್ದರು.

ಅಲ್ಲಿ ಇನ್ನೂ ವಿಚಾರಣೆಯೇ ನಡೆದಿರಲಿಲ್ಲ.

ಆದರೆ ಪ್ರೋಟೋಕಾಲ್ ಪ್ರಕಾರ ಮೊದಲು ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಬೇಕಾದ ಕಾರಣ ಅರ್ಜಿಯನ್ನು ಹಿಂಪಡೆಯಲಾಗುವುದು ಎಂದು ಸುಪ್ರೀಂ ಕೋರ್ಟ್‌ಗೆ ಕೇಜ್ರಿ ಪರ ವಕೀಲ ಅಭಿಷೇಕ್‌ ಸಿಂಘ್ವಿ ತಿಳಿಸಿದರು.