ಸಾರಾಂಶ
ಅರವಿಂದ ಕೇಜ್ರಿವಾಲ್ ಅಬಕಾರಿ ಹಗರಣದಲ್ಲಿ ಜೈಲು ಸೇರಿರುವ ಕಾರಣ, ಇದೇ ಹಗರಣದಲ್ಲಿ ಬಂಧಿತರಾಗಿ ಈಗಷ್ಟೇ ಜೈಲಿನಿಂದ ಹೊರಬಂದಿರುವ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ದೆಹಲಿ ಮತ್ತು ಹರ್ಯಾಣದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಪ್ರಚಾರ ನೇತೃತ್ವ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ.
ನವದೆಹಲಿ: ದಿಲ್ಲಿ ಮುಖ್ಯಮಂತ್ರಿ ಹಾಗೂ ಆಪ್ ನಾಯಕ ಅರವಿಂದ ಕೇಜ್ರಿವಾಲ್ ಅಬಕಾರಿ ಹಗರಣದಲ್ಲಿ ಜೈಲು ಸೇರಿರುವ ಕಾರಣ, ಇದೇ ಹಗರಣದಲ್ಲಿ ಬಂಧಿತರಾಗಿ ಈಗಷ್ಟೇ ಜೈಲಿನಿಂದ ಹೊರಬಂದಿರುವ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ದೆಹಲಿ ಮತ್ತು ಹರ್ಯಾಣದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಪ್ರಚಾರ ನೇತೃತ್ವ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ.
ಈ ನಿಮಿತ್ತ ಸಿಸೋಡಿಯಾ ಭಾನುವಾರ ತಮ್ಮ ನಿವಾಸದಲ್ಲಿ ಪಕ್ಷದ ಹಿರಿಯರ ಸಭೆ ನಡೆಸಿದರು.
ಈ ವರ್ಷಾಂತ್ಯಕ್ಕೆ ಹರ್ಯಾಣದ ವಿಧಾನಸಭಾ ಚುನಾವಣೆಯಲ್ಲಿ 90 ಕ್ಷೇತ್ರಗಳಲ್ಲಿ ಹಾಗೂ ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ದೆಹಲಿಯ 70 ಕ್ಷೇತ್ರಗಳಲ್ಲಿ ಆಪ್ ಸ್ಪರ್ಧಿಸುವ ನಿರೀಕ್ಷೆಯಿದೆ.
ಆಪ್ ಪಕ್ಷ ಸ್ಥಾಪಿಸಲ್ಪಟ್ಟಾಗಿನಿಂದ ಅದರ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿರುವ ಸಿಸೋಡಿಯಾ, ದೆಹಲಿಯ ಸರ್ಕಾರಿ ಶಾಲೆಗಳಲ್ಲಿ ಸುಧಾರಣೆ ತರುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಜೈಲು ಸೇರುವ ಮೊದಲು ಅವರು ಶಿಕ್ಷಣ, ಹಣಕಾಸು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೆರಿದಂತೆ 18 ಮಹತ್ವದ ಖಾತೆಗಳ ಜವಾಬ್ದಾರಿ ಹೊತ್ತಿದ್ದರು.