ದೆಹಲಿ ಮದ್ಯ ಲೈಸೆನ್ಸ್‌ ಹಗರಣದಲ್ಲಿ ಜೈಲು ಪಾಲಾದರೂ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಹರಿಹಾಯ್ದಿರುವ ದೆಹಲಿ ಹೈಕೋರ್ಟ್‌, ದೇಶದ ಹಿತಾಸಕ್ತಿಗಿಂತ ವೈಯಕ್ತಿಕ ಹಿತಾಸಕ್ತಿಗೇ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ ಎಂದು ಕಿಡಿಕಾರಿದೆ.

ನವದೆಹಲಿ: ದೆಹಲಿ ಮದ್ಯ ಲೈಸೆನ್ಸ್‌ ಹಗರಣದಲ್ಲಿ ಜೈಲು ಪಾಲಾದರೂ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಹರಿಹಾಯ್ದಿರುವ ದೆಹಲಿ ಹೈಕೋರ್ಟ್‌, ದೇಶದ ಹಿತಾಸಕ್ತಿಗಿಂತ ವೈಯಕ್ತಿಕ ಹಿತಾಸಕ್ತಿಗೇ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ ಎಂದು ಕಿಡಿಕಾರಿದೆ.

ದೆಹಲಿ ಸರ್ಕಾರಿ ಶಾಲೆಗಳ ನಿರ್ವಹಣೆ ಸರಿಯಾಗಿ ಆಗುತ್ತಿಲ್ಲ ಎಂದು ದೂರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ, ‘ಶಾಲಾ ಮಕ್ಕಳಿಗೆ ಸಮವಸ್ತ್ರ ಸಿಕ್ಕಿಲ್ಲ, ಪಠ್ಯಪುಸ್ತಕ ಪೂರೈಸಿಲ್ಲ ಎಂಬ ವಿಷಯದ ಬಗ್ಗೆ ದೆಹಲಿ ಸರ್ಕಾರಕ್ಕೆ ಕಾಳಜಿಯೇ ಇಲ್ಲದಾಗಿದೆ. ನಿಮ್ಮ ಪಕ್ಷಗಾರರಿಗೆ ಅಧಿಕಾರವೊಂದೇ ಮುಖ್ಯವಾಗಿದೆ. ಅವರಿಗೆ ಇನ್ನೆಷ್ಟು ಅಧಿಕಾರ ಬೇಕೋ ಗೊತ್ತಿಲ್ಲ’ ಎಂದು ಕಿಡಿಕಾರಿತು.