ಸಾರಾಂಶ
ಪಟನಾ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಮಾಘಿ ಪುಣ್ಯ ಸ್ನಾನ ನಿಮಿತ್ತ ಅಧಿಕ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದು, ಬಿಹಾರದಲ್ಲಿ ಕುಂಭಮೇಳಕ್ಕೆ ತೆರಳುವ ರೈಲಿನಲ್ಲಿ ಸ್ಥಳವಕಾಶ ಸಿಗದೇ ರೈಲಿನ ಎಸಿ ಕೋಚ್ ಗಾಜುಗಳನ್ನು ಪ್ರಯಾ ಪುಡಿ ಪುಡಿ ಮಾಡಿದ್ದು, ಕೆಲವರು ಗಾಯಗೊಂಡಿರುವ ಘಟನೆ ನಡೆದಿದೆ. ಕುಂಭಮೇಳಕ್ಕೆ ತೆರಳುತ್ತಿದ್ದ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಕರು ತುಂಬಿ ತುಳುಕುತ್ತಿದ್ದರು. ಕಂಪಾರ್ಟ್‌ಮೆಂಟ್‌ನಿಂದ ಎಸಿ ಕೋಚ್‌ಗೆ ಕಾಲಿಡಲು ಸ್ಥಳವಿಲ್ಲದಷ್ಟು ಜನ ಕಿಕ್ಕಿರಿದಿದ್ದರು. ಹೀಗಿದ್ದರೂ ಮಧುಬನಿ ನಿಲ್ದಾಣದಲ್ಲಿ ಪ್ರಯಾಣಿಕರು ರೈಲು ಹತ್ತಲು ಪ್ರಯತ್ನಿಸಿದ್ದಾರೆ. ಆದರೆ ಅದಾಗಲೇ ಜನ ತುಂಬಿ ಹೋಗಿದ್ದ ಕಾರಣ ಎಸಿ ಕೋಚ್ ಬಾಗಿಲು ಬಂದ್ ಮಾಡಲಾಗಿತ್ತು. ಇದರಿಂದ ಕೋಪಗೊಂಡು ಕೆಲವರು ಎಸಿ ಕೋಚ್ ಬಾಗಿಲುಗಳ ಗಾಜುಗಳನ್ನು ಒಡೆದು ಹಾಕಿದ್ದಾರೆ. ಘಟನೆಯಲ್ಲಿ ಕೆಲ ಪ್ರಯಾಣಿಕರು ಗಾಯಗೊಂಡಿದ್ದಾರೆ. ಇನ್ನೂ ಕೆಲವು ಕಡೆ ಇದೇ ರೀತಿಯಲ್ಲಿ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.