ಸಾರಾಂಶ
ಆಕ್ಸಿಯೋಂ-4 ಮಿಷನ್ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆ(ಐಎಸ್‌ಎಸ್)ಗೆ ತೆರಳಿರುವ ಭಾರತೀಯ ಶುಭಾಂಶು ಶುಕ್ಲಾ ಸೇರಿ 4 ಗಗನಯಾತ್ರಿಗಳು ಜು.14ರಂದು ಭೂಮಿಗೆ ಮರಳುವ ಸಾಧ್ಯತೆ ಇದೆ ಎಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಮಾಹಿತಿ ನೀಡಿದೆ.
ನವದೆಹಲಿ: ಆಕ್ಸಿಯೋಂ-4 ಮಿಷನ್ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆ(ಐಎಸ್‌ಎಸ್)ಗೆ ತೆರಳಿರುವ ಭಾರತೀಯ ಶುಭಾಂಶು ಶುಕ್ಲಾ ಸೇರಿ 4 ಗಗನಯಾತ್ರಿಗಳು ಜು.14ರಂದು ಭೂಮಿಗೆ ಮರಳುವ ಸಾಧ್ಯತೆ ಇದೆ ಎಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಗುರುವಾರ ಮಾಹಿತಿ ನೀಡಿದೆ.
ಈ ಕುರಿತು ಹೇಳಿಕೆ ನೀಡಿರುವ ನಾಸಾ ‘ಐಎಸ್‌ಎಸ್‌ನ ಬೆಳವಣಿಗೆಯನ್ನು ನಾವು ಗಮನಿಸುತ್ತಿದ್ದೇವೆ. ಜು.14ರಂದು ಅನ್‌ಡಾಕಿಂಗ್‌ಗೆ ನಾವು ದಿನಾಂಕ ನಿಗದಿ ಮಾಡಿದ್ದೇವೆ’ ಎಂದು ಹೇಳಿದೆ. ಈ ಹಿಂದಿನ ಯೋಜನೆಯಂತೆ14 ದಿನಗಳ ಬಳಿಕ, ಅಂದರೆ ಜು.10ರಂದು ಅವರು ಮರಳಬೇಕಿತ್ತು. ಆದರೆ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಮರಳುವಿಕೆ ಪ್ರಕ್ರಿಯೆ ಮುಂದೂಡಲಾಗಿತ್ತು.
230 ಸೂರ್ಯೋದಯಕ್ಕೆ ಸಾಕ್ಷಿ:
ಜು.26ರಂದು ಐಎಸ್‌ಎಸ್ ತಲುಪಿರುವ ಗಗನಯಾತ್ರಿಗಳು 2 ವಾರದಲ್ಲಿ ಬಾಹ್ಯಾಕಾಶದಲ್ಲಿ ಸುಮಾರು 100 ಲಕ್ಷ ಕಿ.ಮೀ. ಪ್ರಯಾಣಿಸಿ, ಬರೋಬ್ಬರಿ 230 ಸೂರ್ಯೋದಯಗಳನ್ನು ಕಂಡಿದ್ದಾರೆ. ಇದರರ್ಥ, ಭೂಮಿಯಿಂದ 250 ಮೈಲು ಮೇಲಿರುವ ಅವರು, ಈವರೆಗೆ 230 ಬಾರಿ ಭೂಮಿಗೆ ಪ್ರದಕ್ಷಿಣೆ ಹಾಕಿದ್ದಾರೆ. ಇದರ ಅದ್ಭುತ ಫೋಟೋ, ವಿಡಿಯೋಗಳನ್ನೂ ಸೆರೆಹಿಡಿದು, ಹಂಚಿಕೊಂಡಿದ್ದಾರೆ.