ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ ಮಾಡಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್‌ ಹಸೀನಾ ಸೇರಿದಂತೆ ಅವರ ಮಂತ್ರಿಮಂಡಲದ ಎಲ್ಲಾ ಸಚಿವರ ರಾಜತಾಂತ್ರಿಕ ಪಾಸ್‌ಪೋರ್ಟ್‌ಗಳನ್ನು ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಗುರುವಾರ ರದ್ದುಗೊಳಿಸಿದೆ.

ಢಾಕಾ: ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ ಮಾಡಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್‌ ಹಸೀನಾ ಸೇರಿದಂತೆ ಅವರ ಮಂತ್ರಿಮಂಡಲದ ಎಲ್ಲಾ ಸಚಿವರ ರಾಜತಾಂತ್ರಿಕ ಪಾಸ್‌ಪೋರ್ಟ್‌ಗಳನ್ನು ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಗುರುವಾರ ರದ್ದುಗೊಳಿಸಿದೆ. 

ಸರ್ಕಾರ ಪತನಗೊಂಡ ನಂತರ ಶೇಖ್‌ ಹಸೀನಾ ಹಾಗೂ ಅಕೆಯ ಸಚಿವ ಸಂಪುಟದ ಸಚಿವರಿಗೆ ಯಾವುದೇ ರೀತಿಯ ಅಧಿಕಾರ ಇರುವುದಿಲ್ಲ. ಆದ ಕಾರಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ಗಳನ್ನು ರದ್ದುಗೊಳಿಸಲಾಗಿದೆ ಎಂದು ಮಧ್ಯಂತರ ಸರ್ಕಾರ ತಿಳಿಸಿದೆ.