ತಂತ್ರಜ್ಞಾನ ಕ್ಷೇತ್ರದಲ್ಲಿ ಪುರುಷರಷ್ಟೇ ಸ್ತ್ರೀಯರಿಗೂ ಸಮ ಪಾಲು: ಇಶಾ ಅಂಬಾನಿ

| Published : May 16 2024, 12:51 AM IST / Updated: May 16 2024, 11:15 AM IST

Isha Ambani expensive things
ತಂತ್ರಜ್ಞಾನ ಕ್ಷೇತ್ರದಲ್ಲಿ ಪುರುಷರಷ್ಟೇ ಸ್ತ್ರೀಯರಿಗೂ ಸಮ ಪಾಲು: ಇಶಾ ಅಂಬಾನಿ
Share this Article
  • FB
  • TW
  • Linkdin
  • Email

ಸಾರಾಂಶ

ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಹಾಗೂ ಮಾಹಿತಿ ಮತ್ತು ಸಂವಹನ ಕ್ಷೇತ್ರಗಳಲ್ಲಿ ಯುವತಿಯರ ಪಾಲ್ಗೊಳ್ಳುವಿಕೆ ಹೆಚ್ಚಾಗಬೇಕು ಎಂದು ರಿಲಯನ್ಸ್ ಇಂಡಸ್ಟ್ರೀಸ್ ನಿರ್ದೇಶಕಿ ಇಶಾ ಅಂಬಾನಿ ತಿಳಿಸಿದ್ದಾರೆ.

ನವದೆಹಲಿ: ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಹಾಗೂ ಮಾಹಿತಿ ಮತ್ತು ಸಂವಹನ ಕ್ಷೇತ್ರಗಳಲ್ಲಿ ಯುವತಿಯರ ಪಾಲ್ಗೊಳ್ಳುವಿಕೆ ಹೆಚ್ಚಾಗಬೇಕು ಎಂದು ರಿಲಯನ್ಸ್ ಇಂಡಸ್ಟ್ರೀಸ್ ನಿರ್ದೇಶಕಿ ಇಶಾ ಅಂಬಾನಿ ತಿಳಿಸಿದ್ದಾರೆ.

 ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ತಂತ್ರಜ್ಞಾನ ಕ್ಷೇತ್ರದಲ್ಲಿ ಮಹಿಳೆ ಹಾಗೂ ಪುರುಷರ ಪಾಲ್ಗೊಳ್ಳುವಿಕೆ ಅನುಪಾತವು ಸಮಾನವಾಗಿ ಇರಬೇಕು. ಕಳೆದ ಒಂದು ದಶಕದಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರನ್ನು ಗಮನಿಸಿದರೆ ಮಹಿಳಾ ಪ್ರಾತಿನಿಧ್ಯವು ಶೇ. 6ರಷ್ಟು ಹೆಚ್ಚಾಗಿದೆ. 

ಮಹಿಳೆಯರ ವೃತ್ತಿಜೀವನದಲ್ಲಿ ಸ್ಥಿರತೆಯನ್ನು ಖಚಿತಪಡಿಸಿಕೊಂಡು ಮುಂದಿನ ದಿನಗಳಲ್ಲಿ ನಾಯಕತ್ವ ವಹಿಸುವುದಕ್ಕೆ ಭವಿಷ್ಯವನ್ನು ರೂಪಿಸಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವೈಖರಿಯನ್ನು ಶ್ಲಾಘಿಸಿದರು.