ಸಾರಾಂಶ
ಅಸ್ಸಾಂನಲ್ಲಿ ವಿದ್ಯಾರ್ಥಿಯಾಗಿದ್ದಾಗ ತಾವು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರ ವಿರುದ್ಧ ಅಸ್ಸಾಂನಲ್ಲಿ ಪ್ರತಿಭಟನೆ ನಡೆಸಿದ ವೇಳೆ ತಮ್ಮನ್ನು ಬಂಧಿಸಿ, ದೈಹಿಕ ಕಿರುಕುಳ ನೀಡಲಾಗಿತ್ತು. 7 ದಿನ ಜೈಲಿಗೆ ಹಾಕಲಾಗಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೆನಪಿಸಿಕೊಂಡಿದ್ದಾರೆ.
ಗುವಾಹಟಿ: ಅಸ್ಸಾಂನಲ್ಲಿ ವಿದ್ಯಾರ್ಥಿಯಾಗಿದ್ದಾಗ ತಾವು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರ ವಿರುದ್ಧ ಅಸ್ಸಾಂನಲ್ಲಿ ಪ್ರತಿಭಟನೆ ನಡೆಸಿದ ವೇಳೆ ತಮ್ಮನ್ನು ಬಂಧಿಸಿ, ದೈಹಿಕ ಕಿರುಕುಳ ನೀಡಲಾಗಿತ್ತು. 7 ದಿನ ಜೈಲಿಗೆ ಹಾಕಲಾಗಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೆನಪಿಸಿಕೊಂಡಿದ್ದಾರೆ.
ಡೆರ್ಗಾಂವ್‌ನಲ್ಲಿ ಪೊಲೀಸ್ ಅಕಾಡೆಮಿಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಶಾ, ‘ನಾವು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದೆವು. ಆಗ ಅಸ್ಸಾಂನಲ್ಲಿ ಕಾಂಗ್ರೆಸ್ ಸರ್ಕಾರ ನನ್ನನ್ನು ಥಳಿಸಿ ಬಂಧಿಸಿತ್ತು. ನಾನು ಕೂಡ ಅಸ್ಸಾಂನಲ್ಲಿ 7 ದಿನಗಳ ಕಾಲ ಜೈಲಿನ ಆಹಾರವನ್ನು ಸೇವಿಸಿದ್ದೆ. ಆಗ ಹಿತೇಶ್ವರ ಸೈಕಿಯಾ ಮುಖ್ಯಮಂತ್ರಿಯಾಗಿದ್ದರು’ ಎಂದು ಬಹಿರಂಗಪಡಿಸಿದರು.‘ಕಾಂಗ್ರೆಸ್ ಪಕ್ಷವು ಅಸ್ಸಾಂನಲ್ಲಿ ಶಾಂತಿಗೆ ಅವಕಾಶ ನೀಡಲಿಲ್ಲ. ಆದರೆ ಕಳೆದ 10 ವರ್ಷದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ 10,000 ಕ್ಕೂ ಹೆಚ್ಚು ಯುವಕರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಸೇರಿದ್ದಾರೆ’ ಎಂದರು.