ಕಾಂಗ್ರೆಸ್‌ನ ಭಾರತ್‌ ಜೋಡೋ ನ್ಯಾಯ್‌ ಯಾತ್ರೆಯನ್ನು ಯಶಸ್ಸಿಗೆ ಕಾರಣರಾಗಿದ್ದಕ್ಕೆ ಯುವಕಾಂಗ್ರೆಸ್‌ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌ ಅವರನ್ನು ಪ್ರಶಂಸೆ ವ್ಯಕ್ತಪಡಿಸಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪತ್ರ ಬರೆದಿದ್ದಾರೆ.

ನವದೆಹಲಿ: ಕಾಂಗ್ರೆಸ್‌ನ ಭಾರತ್‌ ಜೋಡೋ ನ್ಯಾಯ್‌ ಯಾತ್ರೆಯನ್ನು ಯಶಸ್ಸಿಗೆ ಕಾರಣರಾಗಿದ್ದಕ್ಕೆ ಯುವಕಾಂಗ್ರೆಸ್‌ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌ ಅವರನ್ನು ಪ್ರಶಂಸೆ ವ್ಯಕ್ತಪಡಿಸಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪತ್ರ ಬರೆದಿದ್ದಾರೆ.

ರಾಹುಲ್‌ ತಮ್ಮ ಪತ್ರದಲ್ಲಿ, ಭಾರತ್‌ ಜೋಡೋ ನ್ಯಾಯ್‌ ಯಾತ್ರೆ ಯಶಸ್ವಿಯಾಗಿ ಮುಕ್ತಾಯಗೊಂಡಿರುವುದಕ್ಕೆ ನೀವು ನಿಮ್ಮ ದಂಡಕ್ಕೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಯಾತ್ರೆಯ ಯಶಸ್ಸಿಗೆ ದುಡಿದ ನಿಮ್ಮ ಕಾರ್ಯಕರ್ತರ ಶ್ರಮ ಮೆಚ್ಚುವಂತದ್ದು ಎಂದು ಹೊಗಳಿಕೆ ನುಡಿದಿದ್ದಾರೆ.

ಇದರೊಂದಿಗೆ ಎರಡು ತಿಂಗಳ ಭಾರತ್‌ ಜೋಡೋ ನ್ಯಾಯ್‌ ಯಾತ್ರೆಯು ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಅನ್ಯಾಯಕ್ಕೆ ಒಳಗಾದವರ ಪರವಾಗಿ ಮಿಡಿದಿದೆ. ಈ ಯಾತ್ರೆ ವೇಳೆ ಬಿಜೆಪಿಯ ಒಡೆದು ಆಳುವ ನೀತಿಗೆ ನಾವು ಸಾಕ್ಷಿಯಾಗಿದ್ದೇವೆ. ಮುಂದೆ ದೇಶದ ಒಳಿತಿಗಾಗಿ ನಡೆವ ಕಾರ್ಯಗಳಿಗೆಲ್ಲ ನೀವು ಹಾಗೂ ಭಾರತೀಯ ಯುವ ಕಾಂಗ್ರೆಸ್‌ ನಮ್ಮ ಬೆಂಬಲಕ್ಕೆ ನಿಲ್ಲುತ್ತೀರಿ ಎಂದು ಭಾವಿಸಿದ್ದೇನೆ’ ಎಂದು ಮೆಚ್ಚುಗೆ ಮಾತನ್ನು ಬರೆದಿದ್ದಾರೆ.