2023ರ ಅಕ್ಟೋಬರ್ 1ರ ಬಳಿಕ ಹುಟ್ಟಿದ ಪ್ರತಿಯೊಬ್ಬ ನಾಗರಿಕನಿಗೂ ಪಾಸ್‌ಪೋರ್ಟ್‌ಗೆ ಜನನ ಪ್ರಮಾಣಪತ್ರ ಕಡ್ಡಾಯ

| N/A | Published : Mar 02 2025, 01:16 AM IST / Updated: Mar 02 2025, 06:37 AM IST

ಸಾರಾಂಶ

2023ರ ಅಕ್ಟೋಬರ್ 1ರ ಬಳಿಕ ಹುಟ್ಟಿದ ಪ್ರತಿಯೊಬ್ಬ ನಾಗರಿಕನಿಗೂ ಪಾಸ್‌ಪೋರ್ಟ್ ಪಡೆಯಲು ಜನನ ಪ್ರಮಾಣಪತ್ರವನ್ನು ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

 ನವದೆಹಲಿ: 2023ರ ಅಕ್ಟೋಬರ್ 1ರ ಬಳಿಕ ಹುಟ್ಟಿದ ಪ್ರತಿಯೊಬ್ಬ ನಾಗರಿಕನಿಗೂ ಪಾಸ್‌ಪೋರ್ಟ್ ಪಡೆಯಲು ಜನನ ಪ್ರಮಾಣಪತ್ರವನ್ನು ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಕಾನೂನು-2023ರ ಅನ್ವಯ ಶುಕ್ರವಾರ ಅಧಿಕೃತ ಗೆಜೆಟ್‌ನಲ್ಲಿ ಈ ಅಧಿಸೂಚನೆ ಹೊರಡಿಸಲಾಗಿದೆ.

ಆದರೆ 2025ರ ಪಾಸ್‌ಪೋರ್ಟ್ (ತಿದ್ದುಪಡಿ) ನಿಯಮಗಳ ಪ್ರಕಾರ, ಈ ದಿನಾಂಕಕ್ಕಿಂತ ಮೊದಲು ಜನಿಸಿದವರಿಗೆ ಜನನ ಪುರಾವೆಯಾಗಿ ಪರ್ಯಾಯ ದಾಖಲೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅವರು ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಶಾಲೆಯ ಟ್ರಾನ್ಸಫರ್​ ಪ್ರಮಾಣಪತ್ರಗಳಂತಹ ಇತರ ದಾಖಲೆಗಳನ್ನು ಸಲ್ಲಿಸಬಹುದಾಗಿದೆ.

ಪಾಸ್​ಪೋರ್ಟ್​ ಪಡೆಯುವ ನೀತಿಯಲ್ಲಿ ಸರಳೀಕರಣ ಮಾಡಲು ಮುಂದಾದ ಕೇಂದ್ರ ಸರ್ಕಾರ, ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಕಾನೂನನ್ನು 2023ರ ಅಕ್ಟೋಬರ್ 1ರಿಂದ ಜಾರಿಗೊಳಿಸಿತ್ತು.