ಒಡಿಶಾದಲ್ಲಿ ಬಿಜೆಪಿ ಬಿಜೆಡಿ ಮೈತ್ರಿ ಇಲ್ಲ: ಬಿಜೆಪಿ ಏಕಾಂಗಿ ಸ್ಪರ್ಧೆ

| Published : Mar 23 2024, 01:11 AM IST / Updated: Mar 23 2024, 08:40 AM IST

ಒಡಿಶಾದಲ್ಲಿ ಬಿಜೆಪಿ ಬಿಜೆಡಿ ಮೈತ್ರಿ ಇಲ್ಲ: ಬಿಜೆಪಿ ಏಕಾಂಗಿ ಸ್ಪರ್ಧೆ
Share this Article
  • FB
  • TW
  • Linkdin
  • Email

ಸಾರಾಂಶ

ಒಡಿಶಾದಲ್ಲಿ ಬಿಜೆಪಿ-ಬಿಜೆಡಿ ಮೈತ್ರಿ ಮಾಡಿಕೊಳ್ಳದೆ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷರು ತಿಳಿಸಿದ್ದಾರೆ.

ಭುವನೇಶ್ವರ್‌: ಒಡಿಶಾದಲ್ಲಿ ನಡೆಯಲಿರುವ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಆಡಳಿತಾರೂಢ ಬಿಜೆಡಿ ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧಿಸಲಿವೆ. ರಾಜ್ಯದಲ್ಲಿ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂಬುದಾಗಿ ಬಿಜೆಪಿ ಸ್ಪಷ್ಟಪಡಿಸಿದೆ. 

ಒಡಿಶಾದಲ್ಲಿ ನಾಮಪತ್ರ ಸಲ್ಲಿಕೆ ಏ.18ರಿಂದ ಪ್ರಾರಂಭವಾಗಲಿದ್ದು, ಈ ಬಾರಿ ನವೀನ್‌ ಪಟ್ನಾಯಕ್‌ ನೇತೃತ್ವದ ಬಿಜು ಜನತಾ ದಳ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಎನ್‌ಡಿಎ ಸೇರಬಹುದು ಎಂದು ನಿರೀಕ್ಷಿಸಲಾಗಿತ್ತು. 

ಇದರ ಕುರಿತಾಗಿ ಹಲವು ಬಾರಿ ಮಾತುಕತೆಯೂ ನಡೆದಿತ್ತು. ಆದರೆ ಮಾತುಕತೆಗಳು ಫಲಪ್ರದವಾಗದ ಹಿನ್ನೆಲೆಯಲ್ಲಿ ಎಲ್ಲ 21 ಲೋಕಸಭಾ ಕ್ಷೇತ್ರ ಮತ್ತು 147 ವಿಧಾನಸಭಾ ಕ್ಷೇತ್ರಗಳಲ್ಲಿ ಏಕಾಂಗಿ ಸ್ಪರ್ಧೆ ಮಾಡುವುದಾಗಿ ಬಿಜೆಪಿ ಪ್ರಕಟಿಸಿದೆ.