ಸಾರಾಂಶ
ನವದೆಹಲಿ: ಲೋಕಸಭೆ ಚುನಾವಣೆ ದಿನಾಂಕ ಘೋಷಣೆ ಮುನ್ನಾದಿನ ಎರಡು ಚುನಾವಣಾ ಪೂರ್ವ ಸಮೀಕ್ಷಾ ವರದಿಗಳು ಪ್ರಕಟವಾಗಿದ್ದು, ಎರಡೂ ಸಮೀಕ್ಷೆಗಳು ಕೇಂದ್ರದಲ್ಲಿ ಮತ್ತೆ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಬರಲಿದೆ ಎಂದು ಹೇಳಿವೆ.
ಝೀ ನ್ಯೂಸ್ ನಡೆಸಿದ ಸಮೀಕ್ಷೆ ಅನ್ವಯ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟ 543 ಲೋಕಸಭೆ ಕ್ಷೇತ್ರಗಳಲ್ಲಿ 390ರಲ್ಲಿ ವಿಜೇತವಾಗಲಿದೆ.
ಇನ್ನು ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ 96 ಸೀಟುಗಳು ಪಡೆಯುವಲ್ಲಿ ಯಶಸ್ವಿಯಾಗಲಿದೆ ಜೊತೆಗೆ 57 ಸ್ವತಂತ್ರ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಸಮೀಕ್ಷೆ ಹೇಳಿದೆ.
ಇನ್ನು ಎಬಿಪಿ ನ್ಯೂಸ್ ನಡೆಸಿದ ಸಮೀಕ್ಷೆ ಅನ್ವಯ ಪ್ರಧಾನಿ ನರೇಂದ್ರ ಮೋದಿ ಅವರ ಎನ್‌ಡಿಎ ಒಕ್ಕೂಟ 366 ಸ್ಥಾನಗಳಲ್ಲಿ ಜಯಭೇರಿ ಸಾಧಿಸಲಿದೆ. ಇನ್ನು ವಿಪಕ್ಷ ಇಂಡಿಯಾ ಕೂಟ 156 ಸ್ಥಾನ ಪಡೆಯಲಿದೆ. 21 ಸ್ಥಾನದಲ್ಲಿ ಇತರೆ ಅಭ್ಯರ್ಥಿಗಳು ಜಯ ಕಾಣಲಿದ್ದಾರೆ.
ಕರ್ನಾಟಕದಲ್ಲಿ ಎನ್‌ಡಿಎಗೆ 23 ಸ್ಥಾನ ಎಬಿಪಿ ನ್ಯೂಸ್ ಸಮೀಕ್ಷೆ ಪ್ರಕಾರ ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ 23 ಸ್ಥಾನಗಳಲ್ಲಿ ಗೆಲ್ಲಲಿದೆ. ಕಾಂಗ್ರೆಸ್ 5 ಸ್ಥಾನಗಳಲ್ಲಿ ಗೆಲುವನ್ನು ಸಾಧಿಸಲಿದೆ.