ಸಾರಾಂಶ
ದೇಶದ ಅತಿಹೆಚ್ಚು ಜನಸಂಖ್ಯೆ ಇರುವ ಲೋಕಸಭಾ ಕ್ಷೇತ್ರಗಳಲ್ಲಿ ಒಂದಾಗಿರುವ ಹೈದರಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಅಸಾದುದ್ದೀನ್ ಓವೈಸಿ ಕುಟುಂಬ ಕಳೆದ 40 ವರ್ಷಗಳಿಂದ ಭದ್ರಕೋಟೆ ನಿರ್ಮಿಸಿದೆ. ಈ ಕ್ಷೇತ್ರದ ಮತದಾರರ ಪೈಕಿ ಮುಸ್ಲಿಮರೇ ಅಧಿಕವಾಗಿದ್ದರೂ (ಶೇ.70), ಬಿಜೆಪಿಯು ಮುಸ್ಲಿಮೇತರ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಲಕ್ಷಕ್ಕಿಂತಲೂ ಅಧಿಕ ಮತಗಳಿಕೆ ಮಾಡುವ ಮೂಲಕ ಪ್ರತಿಬಾರಿ ಅಸಾದುದ್ದೀನ್ ಓವೈಸಿ ಗೆಲುವನ್ನು ತುಸು ತ್ರಾಸಗೊಳಿಸುತ್ತಿದೆ.
ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಕಟ್ಟಾ ಆರ್‌ಎಸ್‌ಎಸ್ ಕಾರ್ಯಕರ್ತೆ, ಸಿಡಿಲು ನುಡಿಯ ಹೋರಾಟಗಾರ್ತಿ, ಭರತನಾಟ್ಯ ಕಲಾವಿದೆ ಮಾಧವಿ ಲತಾ ಅವರನ್ನು ಕಣಕ್ಕಿಳಿಸಿದೆ. ಪಕ್ಷದ ವಲಯದಲ್ಲಿ ಗುರುತಿಸಿಕೊಳ್ಳದಿದ್ದರೂ ಹೊರಗೆ ತಮ್ಮ ವಾಕ್ಚಾತುರ್ಯದಿಂದ ಅಸಾಮಾನ್ಯ ಪ್ರಸಿದ್ಧಿ ಪಡೆದಿದ್ದಾರೆ. ಆಕೆಯ ಮೂಲಕ ಮುಸ್ಲಿಂ ಮಹಿಳೆಯರನ್ನು ಓಲೈಸುವ ಬಿಜೆಪಿಯ ಲೆಕ್ಕಾಚಾರ ಫಲಿಸುವುದೇ ಎಂಬುದನ್ನು ಕಾದು ನೋಡಬೇಕಿದೆ.ಮತ್ತೊಂದೆಡೆ ಕ್ಷೇತ್ರದಿಂದ ಸತತ ನಾಲ್ಕು ಬಾರಿ ಸಂಸದರಾಗಿರುವ ಅಸಾದುದ್ದೀನ್ ಓವೈಸಿ ಮತ್ತೊಮ್ಮೆ ಕಣಕ್ಕಿಳಿದಿದ್ದು, ಸುಲಭ ಗೆಲುವಿನ ವಿಶ್ವಾಸದಲ್ಲಿದ್ದಾರೆ. ಜೊತೆಗೆ ಈ ಬಾರಿ ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷವು ಎಂಐಎಂ ಜೊತೆ ಮೈತ್ರಿ ಮಾಡಿಕೊಳ್ಳುವ ಸುಳಿವು ನೀಡಿದ್ದು, ಅವರ ಹಾದಿಯನ್ನು ಮತ್ತಷ್ಟು ಸುಗಮಗೊಳಿಸುವ ಸಾಧ್ಯತೆ ಇದೆ. ಜೊತೆಗೆ ಬಿಆರ್‌ಎಸ್‌ನಿಂದಲೂ ಚಂದ್ರಶೇಖರ್ ರಾವ್ ಹಿಂದಿನಷ್ಟು ಆಕ್ರಮಣಕಾರಿ ಶೈಲಿಯಲ್ಲಿ ಪ್ರಚಾರ ಮಾಡದಿರುವುದು ಈ ಬಾರಿ ಕ್ಷೇತ್ರದಲ್ಲಿ ಇಬ್ಬರ ನಡುವಿನ ನೇರ ಹಣಾಹಣಿಗೆ ವೇದಿಕೆ ಸಿದ್ಧಗೊಳಿಸಬಹುದು.
ಸ್ಟಾರ್ ಕ್ಷೇತ್ರ-ಹೈದರಾಬಾದ್ಮತದಾನದ ದಿನ - ಮೇ.13
ಒಟ್ಟು ವಿಧಾನಸಭಾ ಕ್ಷೇತ್ರಗಳು-7ಪ್ರಮುಖ ಅಭ್ಯರ್ಥಿಗಳು
ಅಸಾದದುದ್ದೀನ್ ಓವೈಸಿ (ಎಐಎಂಐಎಂ), ಮಾಧವಿ ಲತಾ (ಬಿಜೆಪಿ), ಗದ್ದಂ ಶ್ರೀನಿವಾಸ್ ಯಾದವ್ (ಬಿಆರ್‌ಎಸ್)2019ರ ಫಲಿತಾಂಶ:
ಗೆಲುವುಅಸಾದುದ್ದೀನ್ ಓವೈಸಿ (ಎಂಐಎಂ)ಸೋಲುಭಗವಂತ ರಾವ್ (ಬಿಜೆಪಿ)
;Resize=(690,390))
;Resize=(128,128))
;Resize=(128,128))
;Resize=(128,128))
;Resize=(128,128))