ಸಾರಾಂಶ
ಹಾಲಿ ಅಧ್ಯಕ್ಷ ಜೆ.ಪಿ. ನಡ್ಡಾರ ಬಳಿಕ ಬಿಜೆಪಿ ನೂತನ ಅಧ್ಯಕ್ಷರನ್ನು ಮುಂದಿನ ಫೆಬ್ರವರಿಯ ಕೊನೆಯಲ್ಲಿ ಆಯ್ಕೆ ಮಾಡಲಾಗುವುದು ಎಂದು ಪಕ್ಷದ ನಾಯಕರೊಬ್ಬರು ಹೇಳಿದ್ದಾರೆ.
ನವದೆಹಲಿ: ಹಾಲಿ ಅಧ್ಯಕ್ಷ ಜೆ.ಪಿ. ನಡ್ಡಾರ ಬಳಿಕ ಬಿಜೆಪಿ ನೂತನ ಅಧ್ಯಕ್ಷರನ್ನು ಮುಂದಿನ ಫೆಬ್ರವರಿಯ ಕೊನೆಯಲ್ಲಿ ಆಯ್ಕೆ ಮಾಡಲಾಗುವುದು ಎಂದು ಪಕ್ಷದ ನಾಯಕರೊಬ್ಬರು ಹೇಳಿದ್ದಾರೆ.
ಬಿಜೆಪಿಯ ನಿಯಮದ ಪ್ರಕಾರ ಪಕ್ಷದ ನೂತನ ಅಧ್ಯಕ್ಷರ ಆಯ್ಕೆಗೂ ಮೊದಲು ಅರ್ಧದಷ್ಟು ರಾಜ್ಯಗಳಲ್ಲಿ ಚುನಾವಣೆಗಳು ಸಂಪನ್ನಗೊಳ್ಳಬೇಕು. ಹೀಗಿರುವಾಗ, ಶೇ.60ರಷ್ಟು ಬಿಜೆಪಿ ರಾಜ್ಯ ಘಟಕಗಳ ಅಧ್ಯಕ್ಷರ ಅವಧಿ ಈಗಾಗಲೇ ಮುಕ್ತಾಯವಾಗಿದ್ದು, ಜನವರಿಯ ಮಧ್ಯದಲ್ಲಿ ಆ ಜಾಗಕ್ಕೆ ಹೊಸಬರನ್ನು ನೇಮಿಸಲಾಗುವುದು. ನಂತರ ಪಕ್ಷದ ಅಧ್ಯಕ್ಷರ ನೇಮಕ ನಡೆಯಲಿದೆ ಎಂದರು.ಪ್ರಸ್ತುತ ಕೇಂದ್ರ ಸಚಿವರಾಗಿರುವವರನ್ನೇ ಅಧ್ಯಕ್ಷರನ್ನಾಗಿ ಮಾಡಲಾಗುವುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಇನ್ನೂ ಯಾವುದೂ ಅಂತಿಮವಾಗಿಲ್ಲ’ ಎಂದರು. ಪ್ರಸ್ತುತ ಕೇಂದ್ರ ಆರೋಗ್ಯ ಸಚಿವರಾಗಿರುವ ಜೆ.ಪಿ. ನಡ್ಡಾ ಅವರು 2020ರಿಂದ ಈ ಹುದ್ದೆಯಲ್ಲಿದ್ದಾರೆ.
ರೇಸಲ್ಲಿ ಯಾರು?:ಅಂದಹಾಗೆ, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ರಾಜಸ್ಥಾನದ ಮಾಜಿ ಸಿಎಂ ವಸುಂಧರಾ ರಾಜೆ, ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಸುನಿಲ್ ಬನ್ಸಲ್ ಬಿಜೆಪಿ ಅಧ್ಯಕ್ಷ ಹುದ್ದೆಯ ರೇಸ್‌ನಲ್ಲಿರುವ ಪ್ರಮುಖರು.