ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಟಿಎಂಸಿ ಸಂಸದೆ ಮಹುವಾ ಲಂಚ: ಬಿಜೆಪಿ ಆರೋಪ, ದೂರು

| Published : Oct 16 2023, 01:46 AM IST / Updated: Oct 16 2023, 11:36 AM IST

Mahua Moitra
ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಟಿಎಂಸಿ ಸಂಸದೆ ಮಹುವಾ ಲಂಚ: ಬಿಜೆಪಿ ಆರೋಪ, ದೂರು
Share this Article
  • FB
  • TW
  • Linkdin
  • Email

ಸಾರಾಂಶ

ತೃಣಮೂಲ ಕಾಂಗ್ರೆಸ್‌ ಸಂಸದೆ ಮಹುವಾ ಮೊಯಿತ್ರಾ ಸಂಸತ್‌ ಕಲಾಪದಲ್ಲಿ ಪ್ರಶ್ನೆ ಕೇಳಲು ಉದ್ಯಮಿಯೊಬ್ಬರಿಂದ ಲಂಚ ಪಡೆದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ನವದೆಹಲಿ: ತೃಣಮೂಲ ಕಾಂಗ್ರೆಸ್‌ ಸಂಸದೆ ಮಹುವಾ ಮೊಯಿತ್ರಾ ಸಂಸತ್‌ ಕಲಾಪದಲ್ಲಿ ಪ್ರಶ್ನೆ ಕೇಳಲು ಉದ್ಯಮಿಯೊಬ್ಬರಿಂದ ಲಂಚ ಪಡೆದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಈ ಕುರಿತು ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ದೂರು ನೀಡಿರುವ ಬಿಜೆಪಿ ಸಂಸದ ನಿಶಿಕಾಂತ್ ದುಬೆ, ಸಂಸತ್‌ ಸಮಿತಿ ರಚಿಸಿ ತನಿಖೆ ಮಾಡಬೇಕೆಂದು ಆಗ್ರಹಿಸಿದ್ದಾರೆ. ಸ್ಪೀಕರ್‌ಗೆ ನೀಡಿರುವ ದೂರಿನಲ್ಲಿ ‘ತೃಣಮೂಲ ಕಾಂಗ್ರೆಸ್‌ ಸಂಸದರು ಮಾಡಿರುವ ಅಪರಾಧ ಐಪಿಸಿ ಸೆಕ್ಷನ್‌ 201ರ ಪ್ರಕಾರ ಅಪರಾಧವಾಗಿದ್ದು, ತಾವು ಸಲ್ಲಿಸಿರುವ ಸಾಕ್ಷ್ಯಗಳ ಆಧಾರವನ್ನು ಪರಿಶೀಲಿಸಿ, ಸೂಕ್ತ ತನಿಖೆ ನಡೆಸಿ ಅವರನ್ನು ಸಂಸತ್‌ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಬೇಕು’ ಎಂದು ತಿಳಿಸಿದ್ದಾರೆ.