ಸಾರಾಂಶ
ನಡ್ಡಾ ನೇತೃತ್ವದಲ್ಲೇ ಲೋಕಸಮರ ಎದುರಿಸಲು ಬಿಜೆಪಿ ಸಜ್ಜುಗೊಂಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದು, ಅವರ ರಾಷ್ಟ್ರಾಧ್ಯಕ್ಷರ ಕಾರ್ಯಾವಧಿಯನ್ನು ಜೂನ್‌ವರೆಗೆ ವಿಸ್ತರಿಸಲು ಮಂಡಳಿ ನಿರ್ಣಯ ಕೈಗೊಂಡಿದೆ.
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅಧಿಕಾರಾವಧಿಯನ್ನು 2024ರ ಜೂನ್‌ವರೆಗೆ ವಿಸ್ತರಣೆ ಮಾಡಲಾಗಿದೆ. ಇಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಪಕ್ಷದ ಹಿರಿಯ ನಾಯಕ ಅಮಿತ್ ಶಾ ಈ ಘೋಷಣೆ ಮಾಡಿದ್ದಾರೆ.
ಈ ಮೂಲಕ ಬಿಜೆಪಿಯು 2024ರ ಲೋಕಸಭಾ ಚುನಾವಣೆಯನ್ನು ನಡ್ಡಾ ನೇತೃತ್ವದಲ್ಲೇ ಎದುರಿಸಲಿದೆ ಎಂದು ಪ್ರಕಟಿಸಿದರು. ನಡ್ಡಾ ಅವರು 2019ರಲ್ಲಿ ಅಮಿತ್ ಶಾ ಅವರ ಬಳಿಕ ಮಧ್ಯಂತರ ಅವಧಿಗೆ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಬಳಿಕ 2020ರಿಂದ ಪೂರ್ಣಾವಧಿ ರಾಷ್ಟ್ರಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.