ಕೀಳು ಹೇಳಿಕೆ: ಬಿಜೆಪಿಯ ಘೋಷ್‌, ಕಾಂಗ್ರೆಸಿನಸುಪ್ರಿಯಾಗೆ ಛೀಮಾರಿ

| Published : Apr 02 2024, 01:06 AM IST

ಕೀಳು ಹೇಳಿಕೆ: ಬಿಜೆಪಿಯ ಘೋಷ್‌, ಕಾಂಗ್ರೆಸಿನಸುಪ್ರಿಯಾಗೆ ಛೀಮಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಚುನಾವಣಾ ಪ್ರಚಾರದ ವೇಳೆ ಕೀಳು ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ದಿಲೀಪ್‌ ಘೋಷ್‌ ಮತ್ತು ಕಾಂಗ್ರೆಸ್‌ ನಾಯಕಿ ಸುಪ್ರೀಯಾ ಶ್ರೀನೇತ್‌ಗೆ ಚುನಾವಣಾ ಆಯೋಗ ಛೀಮಾರಿ ಹಾಕಿದೆ.

ನವದೆಹಲಿ: ಚುನಾವಣಾ ಪ್ರಚಾರದ ವೇಳೆ ಕೀಳು ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ದಿಲೀಪ್‌ ಘೋಷ್‌ ಮತ್ತು ಕಾಂಗ್ರೆಸ್‌ ನಾಯಕಿ ಸುಪ್ರೀಯಾ ಶ್ರೀನೇತ್‌ಗೆ ಚುನಾವಣಾ ಆಯೋಗ ಛೀಮಾರಿ ಹಾಕಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಇಂಥ ಹೇಳಿಕೆ ನೀಡದಂತೆ ಎಚ್ಚರಿಕೆ ನೀಡಿದೆ. ಜೊತೆಗೆ ಮುಂದಿನ ದಿನಗಳಲ್ಲಿ ಇಬ್ಬರ ಹೇಳಿಕೆಗಳ ಮೇಲೂ ನಿಗಾ ಇಡುವುದಾಗಿ ಎಚ್ಚರಿಸಿದೆ. ಅಲ್ಲದೆ ಹೇಳಿಕೆ ಸಂಬಂಧ ಎರಡೂ ಪಕ್ಷಗಳ ಅಧ್ಯಕ್ಷರಿಗೆ ನೋಟಿಸ್‌ ನೀಡಲಾಗಿದ್ದು ತಮ್ಮ ಅಭ್ಯರ್ಥಿಗಳು ಸಾರ್ವಜನಿಕ ಸಭೆಗಳಲ್ಲಿ ಮಾತನಾಡುವಾಗ ಜಾಗರೂಕತೆಯಿಂದ ಇರಲು ಸೂಚಿಸಿದೆ.

ಬಿಜೆಪಿ ನಾಯಕ ದಿಲೀಪ್‌ ಘೋಷ್‌ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಗ್ಗೆ ಹಾಗೂ ಸುಪ್ರಿಯಾ ಶ್ರೀನೇತ್‌, ಕಂಗನಾ ರಣಾವತ್‌ ಬಗ್ಗೆ ಇತ್ತೀಚಿಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು.