ನಾಳೆಯಿಂದ 2 ದಿನಗಳ ಬಿಜೆಪಿ ರಾಷ್ಟ್ರೀಯ ಮಂಡಳಿ ಸಭೆ

| Published : Feb 16 2024, 01:49 AM IST / Updated: Feb 16 2024, 09:14 AM IST

ಸಾರಾಂಶ

ನಾಳೆಯಿಂದ 2 ದಿನಗಳ ಬಿಜೆಪಿ ರಾಷ್ಟ್ರೀಯ ಮಂಡಳಿ ಸಭೆ ನಡೆಯಲಿದ್ದು, ದೇಶಾದ್ಯಂತ 11,500 ಪ್ರತಿನಿಧಿಗಳು ಭಾಗಿ ಆಗಲಿದ್ದಾರೆ.

ನವದೆಹಲಿ: ಬರುವ ಲೋಕಸಭಾ ಚುನಾವಣೆಗೆ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಫೆ.17ರಿಂದ ಎರಡು ದಿನಗಳ ಕಾಲ ದೆಹಲಿಯ ಭಾರತ ಮಂಟಪದಲ್ಲಿ ಬಿಜೆಪಿಯ ರಾಷ್ಟ್ರೀಯ ಮಂಡಳಿ ಸಭೆ ನಡೆಯಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ತಿಳಿಸಿದ ಕೇಂದ್ರ ಸಚಿವ ರವಿಶಂಕರ್‌ ಪ್ರಸಾದ್‌, ‘ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಎರಡು ಪ್ರಮುಖ ನಿಲುವಳಿಯನ್ನು ಮಂಡಿಸಲಾಗುವುದು.

ಇದಕ್ಕಾಗಿ ದೇಶದ ಮೂಲೆಮೂಲೆಗಳಿಂದ ಬಿಜೆಪಿಯ ಎಲ್ಲ ಪದಾಧಿಕಾರಿಗಳು, ಹಾಲಿ ಮತ್ತು ಮಾಜಿ ಸಂಸದರು ಮತ್ತು ಶಾಸಕರು ಹಾಗೂ ಚುನಾಯಿತ ಮಹಾಪೌರರನ್ನೂ ಒಳಗೊಂಡಂತೆ 11,500 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಭೆಯನ್ನು ಉದ್ಘಾಟಿಸಲಿದ್ದು, ಪ್ರಧಾನಿ ನರೇಂದ್ರ ಮೋದಿ ಸಮಾರೋಪ ಭಾಷಣ ಮಾಡಲಿದ್ದಾರೆ’ ಎಂದರು.