ಸಾರಾಂಶ
ಮುಂಬೈ ನಗರದ ಆರು ಆಯಕಟ್ಟಿನ ಪ್ರದೇಶಗಳಲ್ಲಿ ಬಾಂಬ್ ಸ್ಫೋಟಿಸಲಾಗುತ್ತದೆ ಎಂದು ಬಾಂಬೆ ಪೊಲೀಸರಿಗೆ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ನಗರದಾದ್ಯಂತ ಪೊಲೀಸರು ಭಾರೀ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.
ಮುಂಬೈ: ಮುಂಬೈ ನಗರದ ವಿವಿಧ ಕಡೆಗಳಲ್ಲಿ ಬಾಂಬ್ ಇರಿಸಲಾಗಿದ್ದು, ಅವುಗಳನ್ನು ಸ್ಫೋಟಿಸಲಾಗುತ್ತದೆ ಎಂದು ಮುಂಬೈ ಪೊಲೀಸರಿಗೆ ಬಾಂಬ್ ಬೆದರಿಕೆ ಸಂದೇಶವೊಂದು ಬಂದಿದೆ.
ಗುರುವಾರ ಮಧ್ಯರಾತ್ರಿ 12.30ಕ್ಕೆ ವರ್ಲಿಯಲ್ಲಿರುವ ಟ್ರಾಫಿಕ್ ಕಂಟ್ರೋಲ್ ರೂಮ್‌ಗೆ ಈ ಸಂದೇಶ ರವಾನಿಸಲಾಗಿದೆ. ತಕ್ಷಣವೇ ನಗರ ಪೊಲೀಸರು ಹೈ ಅಲರ್ಟ್ ಆಗಿದ್ದು ಈ ಕುರಿತು ತನಿಖೆ ಆರಂಭಿಸಿದ್ದಾರೆ.
ಸದ್ಯ ಈ ಸುದ್ದಿ ಇದೀಗ ನಗರದ ಜನರಲ್ಲಿ ಆತಂಕ ಮೂಡಿಸಿದೆ. ಪ್ರಕರಣ ಕುರಿತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505 (2) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಹಾಗೂ ನಗರದಾದ್ಯಂತ ಭಾರೀ ಎಚ್ಚರಿಕೆ ವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.