ಸಾರಾಂಶ
2019ರ ಏಪ್ರಿಲ್‌ನಲ್ಲಿ ಕಾಂಗ್ರೆಸ್ ಸೇರಿದ್ದ ಬಾಕ್ಸಿಂಗ್‌ನಲ್ಲಿ ಭಾರತದ ಮೊದಲ ಒಲಿಂಪಿಕ್ ಪದಕ ವಿಜೇತ ವಿಜೇಂದರ್ ಸಿಂಗ್ ಬುಧವಾರ ಬಿಜೆಪಿಗೆ ಸೇರ್ಪಡೆಯಾದರು.
ನವದೆಹಲಿ: 2019ರ ಏಪ್ರಿಲ್‌ನಲ್ಲಿ ಕಾಂಗ್ರೆಸ್ ಸೇರಿದ್ದ ಬಾಕ್ಸಿಂಗ್‌ನಲ್ಲಿ ಭಾರತದ ಮೊದಲ ಒಲಿಂಪಿಕ್ ಪದಕ ವಿಜೇತ ವಿಜೇಂದರ್ ಸಿಂಗ್ ಬುಧವಾರ ಬಿಜೆಪಿಗೆ ಸೇರ್ಪಡೆಯಾದರು.
ಅವರು 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ದಕ್ಷಿಣ ದೆಹಲಿ ಕ್ಷೇತ್ರದಿಂದ ಸ್ಫರ್ಧಿಸಿ ಸೋತಿದ್ದರು. ಮಥುರಾದಿಂದ ಈ ಬಾರಿ ವಿಜೇಂದರ್ ಅವರನ್ನು ಬಿಜೆಪಿ ಕಣಕ್ಕೆ ಇಳಿಸಲಿದೆ ಎಂಬ ಗುಸುಗುಸು ಇತ್ತಾದರೂ, ಅಲ್ಲಿಗೆ ಮಾಜಿ ಸಂಸದೆ, ನಟಿ ಹೇಮಮಾಲಿನಿ ಅವರಿಗೇ ಪಕ್ಷ ಟಿಕೆಟ್ ನೀಡಿತ್ತು.
ವಿಜೇಂದರ್ ಅವರು ಸಾಕಷ್ಟು ಪ್ರಭಾವ ಹೊಂದಿರುವ ಹರಿಯಾಣ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನದ ಯಾವುದಾದರೂ ಕ್ಷೇತ್ರದಿಂದ ಕಣಕ್ಕೆ ಇಳಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))