ಸಾರಾಂಶ
: ದೆಹಲಿ ಅಬಕಾರಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ಬಂಧಿತರಾಗಿರುವ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದು, ಅವರನ್ನು ದೆಹಲಿಯ ದೀನ್‌ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೈದರಾಬಾದ್: ದೆಹಲಿ ಅಬಕಾರಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ಬಂಧಿತರಾಗಿರುವ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದು, ಅವರನ್ನು ದೆಹಲಿಯ ದೀನ್‌ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಬಕಾರಿ ಹಗರಣದಲ್ಲಿ ಮಾ.15ರಂದು ದೆಹಲಿಯ ತಿಹಾರ್ ಜೈಲು ಸೇರಿದ ಕವಿತಾ ಅವರು ಮಂಗಳವಾರ ಸಂಜೆ ಇದ್ದಕ್ಕಿದ್ದಂತೆ ಜೈಲಿನಲ್ಲಿ ಕುಸಿದುಬಿದ್ದರು. ಈ ವೇಳೆ ಅಲ್ಲೇ ಇದ್ದ ಅಧಿಕಾರಿಗಳು ಕವಿತಾರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.ಕೆ.ಕವಿತಾ ಅವರು ತೆಲಂಗಾಣದ ಕೆಲ ಮದ್ಯ ಉದ್ಯಮಿಗಳಿಗೆ ಪರವಾನಗಿ ಕೊಡಿಸುವ ಸಲುವಾಗಿ ಲಂಚ ಪಡೆದಿದ್ದರು ಎಂಬ ಆರೋಪ ಒದೆ. ಹೀಗಾಗಿ ಜಾರಿ ನಿರ್ದೇಶನಾಲಯ ಅವರನ್ನು ಬಂಧಿಸಿದೆ.