ಬಾಹ್ಯಾಕಾಶ ಕ್ಷೇತ್ರಕ್ಕೆ ಸಂಬಂಧಿಸಿದ ನವೋದ್ಯಮಗಳಿಗೆ ಉತ್ತೇಜನ: ಕೇಂದ್ರದಿಂದ ₹ 1000 ಕೋಟಿ ನಿಧಿ

| Published : Oct 25 2024, 01:04 AM IST / Updated: Oct 25 2024, 04:56 AM IST

Narendra Modi

ಸಾರಾಂಶ

ಬಾಹ್ಯಾಕಾಶ ಕ್ಷೇತ್ರಕ್ಕೆ ಸಂಬಂಧಿಸಿದ ನವೋದ್ಯಮಗಳಿಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ 1000 ಕೋಟಿ ರು.ಗಳ ವೆಂಚರ್‌ ಕ್ಯಾಪಿಟಲ್‌ ನಿಧಿ ಸ್ಥಾಪಿಸಲು ನಿರ್ಧರಿಸಿದೆ.

 ನವದೆಹಲಿ : ಬಾಹ್ಯಾಕಾಶ ಕ್ಷೇತ್ರಕ್ಕೆ ಸಂಬಂಧಿಸಿದ ನವೋದ್ಯಮಗಳಿಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ 1000 ಕೋಟಿ ರು.ಗಳ ವೆಂಚರ್‌ ಕ್ಯಾಪಿಟಲ್‌ ನಿಧಿ ಸ್ಥಾಪಿಸಲು ನಿರ್ಧರಿಸಿದೆ.

ಗುರುವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಬಾಹ್ಯಾಕಾಶ ಕ್ಷೇತ್ರದ ಸ್ಟಾರ್ಟಪ್‌ಗಳಿಗೆ ನೆರವಾಗಲು ಈ ನಿಧಿ ಸ್ಥಾಪಿಸಲು ನಿರ್ಧರಿಸಲಾಗಿದೆ. ಖಾಸಗಿ ಕ್ಷೇತ್ರದ ಸುಮಾರು 40 ಸ್ಟಾರ್ಟಪ್‌ಗಳಿಗೆ ಈ ನಿಧಿಯಿಂದ ನೆರವಾಗುವ ನಿರೀಕ್ಷೆಯಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಬಾಹ್ಯಾಕಾಶ ತಂತ್ರಜ್ಞಾನಕ್ಕೆ ಸಂಬಂಧಿಸಿದ ಸಂಶೋಧನೆ ಹಾಗೂ ಕಾರ್ಯಕ್ರಮಗಳ ವೇಗವನ್ನು ಈ ನಿಧಿ ಹೆಚ್ಚಿಸಲಿದೆ. ಖಾಸಗಿ ಸಹಭಾಗಿತ್ವದಿಂದ ದೇಶದ ಬಾಹ್ಯಾಕಾಶ ಕ್ಷೇತ್ರದ ಬೆಳವಣಿಗೆಗೂ ನೆರವಾಗಲಿದೆ. ಮುಂದಿನ ಹಂತದ ಅಭಿವೃದ್ಧಿ ಯೋಜನೆಗಳಿಗೆ ಬಂಡವಾಳ ಆಕರ್ಷಿಸುವುದಕ್ಕೂ ಇದರಿಂದ ಅನುಕೂಲವಾಗಲಿದೆ ಎಂದು ವೈಷ್ಣವ್‌ ಹೇಳಿದ್ದಾರೆ.