ಟ್ರಂಪ್ ಕೊಲ್ಲುತ್ತೇವೆ: ಮುಸ್ಲಿಂ ಮಹಿಳೆಯರ ಆಕ್ರೋಶ
ಕಾಶ್ಮೀರದಲ್ಲಿ ಇಂಟರ್ನೆಟ್ ಸ್ಥಗಿತ । ಶಾಲೆಗಳು ಬಂದ್ನವದೆಹಲಿ: ಶಿಯಾ ಮುಸ್ಲಿಮರ ಸುಪ್ರೀಂ ನಾಯಕ ಖಮೇನಿ ಹತ್ಯೆ ಖಂಡಿಸಿ ದೇಶಾದ್ಯಂತ 2ನೇ ದಿನವೂ ಪ್ರತಿಭಟನೆ ಮುಂದುವರೆದಿದೆ, ಜಮ್ಮು ಕಾಶ್ಮೀರದಲ್ಲಿ ಇಂಟರ್ನೆಟ್ ಸ್ಥಗಿತಗೊಂಡಿದ್ದರೆ, ಇತ್ತ ದೆಹಲಿಯಲ್ಲಿ ಟ್ರಂಪ್ ಮತ್ತು ನೆತನ್ಯಾಹು ಹತ್ಯೆಗೈಯುತ್ತೇವೆ ಎಂದು ಕೆಲ ಮುಸ್ಲಿಂ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ 15ಲಕ್ಷಕ್ಕೂ ಹೆಚ್ಚು ಶಿಯಾಗಳಿರುವ ಲಾಲ್ ಚೌಕ್, ಸೈದಾ ಕದಾಲ್, ಬುಡ್ಗಾಮ್, ಬಂಡಿಪೋರಾ, ಅನಂತ್‌ನಾಗ್, ಪುಲ್ವಾಮದಲ್ಲಿ ಪ್ರತಿಭಟನೆ ನಡೆದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಶಿಕ್ಷಣ ಸಂಸ್ಥೆಗಳನ್ನು ಬಂದ್ ಮಾಡಲಾಗಿತ್ತು. ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಚೌಕ್‌ನಲ್ಲಿರುವ ಪ್ರಸಿದ್ಧ ಘಂಟಾ ಘರ್ ಅನ್ನು ಜನರ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿತ್ತು.ದೆಹಲಿಯ ಸೀಲಂಪುರ, ಜಂತರ್ ಮಂತರ್‌ನಲ್ಲಿಯೂ ಪ್ರತಿಭಟನೆ ನಡೆದಿದೆ . ಈ ವೇಳೆ ಮಹಿಳೆಯೊಬ್ಬರು ‘ ಪ್ರಧಾನಿ ನರೇಂದ್ರ ಮೋದಿಯವರು ನನಗೆ ಅನುಮತಿ ನೀಡಿದರೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹತ್ಯೆ ಮಾಡುತ್ತೇನೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಆಂಧ್ರಪ್ರದೇಶ, ಉತ್ತರಪ್ರದೇಶ, ಮಧ್ಯಪ್ರದೇಶ ರಾಜ್ಯಗಳಲ್ಲಿಯೂ ಸಾವಿರಾರು ಮುಸ್ಲಿಮರು ಪ್ರತಿಭಟನೆ ನಡೆಸಿದ್ದಾರೆ,