ಪೋಪ್ ಫ್ರಾನ್ಸಿಸ್‌ಗೆ ಅಂತಿಮ ವಿದಾಯ : ಗಣ್ಯರಿಂದ ನಮನ

| N/A | Published : Apr 27 2025, 01:33 AM IST / Updated: Apr 27 2025, 07:16 AM IST

ಸಾರಾಂಶ

ಕಳೆದ ಸೋಮವಾರ ನಿಧನರಾದ ಕ್ರೈಸ್ತರ ಪರಮೋಚ್ಛ ಗುರು ಪೋಪ್ ಫ್ರಾನ್ಸಿಸ್‌ ಅವರ ಅಂತ್ಯಕ್ರಿಯೆ ಶನಿವಾರ ನಡೆದಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು, ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಸೇರಿದಂತೆ ಹಲವರು ಪೋಪ್‌ಗೆ ಅಂತಿಮ ನಮನ ಸಲ್ಲಿಸಿದರು.

 ವ್ಯಾಟಿಕನ್ ಸಿಟಿ: ಕಳೆದ ಸೋಮವಾರ ನಿಧನರಾದ ಕ್ರೈಸ್ತರ ಪರಮೋಚ್ಛ ಗುರು ಪೋಪ್ ಫ್ರಾನ್ಸಿಸ್‌ ಅವರ ಅಂತ್ಯಕ್ರಿಯೆ ಶನಿವಾರ ನಡೆದಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು, ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಸೇರಿದಂತೆ ಹಲವರು ಪೋಪ್‌ಗೆ ಅಂತಿಮ ನಮನ ಸಲ್ಲಿಸಿದರು.

ಶನಿವಾರ ಮಧ್ಯಾಹ್ನ 1.30 ಗಂಟೆಯಿಂದ ಪೋಪ್ ಅಂತ್ಯಕ್ರಿಯೆಯ ವಿಧಿ ವಿಧಾನಗಳು ಪ್ರಾರಂಭಗೊಂಡವು. ಸೇಂಟ್‌ ಪೀಟರ್ಸ್‌ ಸ್ಕ್ವೇರ್‌ನಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ವಿವಿಧ ದೇಶಗಳ ಮುಖ್ಯಸ್ಥರು, ಪ್ರತಿನಿಧಿಗಳು ರಾಜಕುಮಾರರು ಭಾಗವಹಿಸಿದ್ದರು. ಪೋಪ್‌ ಪಾರ್ಥಿವ ಶರೀರಕ್ಕೆ ಸುಮಾರು 2,50,000 ಮಂದಿ ಅಂತಿಮ ನಮನ ಸಲ್ಲಿಸಿದರು. ಪೋಪ್‌ ಅವರ ಆಸೆಯಂತೆ ರೋಮ್‌ನ ಸೇಂಟ್‌ ಮೇರಿ ಚರ್ಚ್‌ನಲ್ಲಿ ಸಂಪ್ರದಾಯದ ಪ್ರಕಾರ ಅಂತ್ಯಸಂಸ್ಕಾರ ನಡೆಸಲಾಯಿತು.

ಭಾರತದಿಂದ ರಾಷ್ಟ್ರಪತಿ ಮುರ್ಮು ಪೋಪ್ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದು, ಈ ಫೋಟೋಗಳನ್ನು ಪ್ರಧಾನಿ ಮೋದಿ ತಮ್ಮ ಜಾಲತಾಣದಲ್ಲಿ ಹಂಚಿಕೊಂಡಿದ್ದು, ‘ ರಾಷ್ಟ್ರಪತಿ ಅವರು ಭಾರತದ ಪರವಾಗಿ ಪೋಪ್ ಫ್ರಾನ್ಸಿಸ್‌ ಅವರಿಗೆ ಗೌರವ ಸಲ್ಲಿಸಿದ್ದಾರೆ. ಸಮಾಜಕ್ಕೆ ಅವರು ನೀಡಿದ ಸೇವೆಯನ್ನು ಜಗತ್ತು ಯಾವಾಗಲೂ ನೆನಪಿಕೊಳ್ಳುತ್ತದೆ’ ಎಂದಿದ್ದಾರೆ.