ಸಾರಾಂಶ
ಅನುಮತಿ ಪಡೆಯದೆ ಪ್ರಚಾರ ಮಾಡಿ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ನಟ ಅಲ್ಲು ಅರ್ಜುನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ನಂದ್ಯಾಲ್: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ನಟ ಅಲ್ಲು ಅರ್ಜುನ್ ವಿರುದ್ಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಶಾಸಕ ಶಿಲ್ಪಾ ರವಿ ಚಂದ್ರ ಕಿಶೋರ್ ರೆಡ್ಡಿ ಅವರನ್ನು ಬೆಂಬಲಿಸಲು ಅಲ್ಲು ಅರ್ಜುನ್ ಆಂಧ್ರಪ್ರದೇಶದ ನಂದ್ಯಾಲ ಪ್ರದೇಶಕ್ಕೆ ಶನಿವಾರ ಆಗಮಿಸಿದ್ದರು.
ಆದರೆ ಕ್ಷೇತ್ರದ ಚುನಾವಣಾ ಅಧಿಕಾರಿಯ ಪೂರ್ವಾನುಮತಿ ಪಡೆಯದೇ ಆಗಮಿಸಿ ಪ್ರಚಾರ ಮಾಡಿದ್ದು ನೀತಿ ಸಂಹಿತೆ ಉಲ್ಲಂಘನೆ ಎಂಬ ಕಾರಣಕ್ಕೆ ಅಲ್ಲು ಅರ್ಜುನ್ ಮತ್ತು ವೈಎಸ್‌ಆರ್ ಕಾಂಗ್ರೆಸ್ ಶಾಸಕ ಶಿಲ್ಪಾ ರವಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.