ಸಾರಾಂಶ
ವಾಗ್ದಂಡನೆಗೆ ಶಿಫಾರಸು ಮಾಡಿರುವ ಸುಪ್ರೀಂ ಕೋರ್ಟ್‌ನ ಆಂತರಿಕ ವಿಚಾರಣಾ ಸಮಿತಿಯ ವರದಿಯನ್ನು ಅಮಾನ್ಯಗೊಳಿಸುವಂತೆ ಕೋರಿ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾ। ಯಶವಂತ್ ವರ್ಮಾ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ನವದೆಹಲಿ: ಮನೆಯಲ್ಲಿ ಕಂತೆ ಕಂತೆ ನೋಟು ಸಿಕ್ಕ ಪ್ರಕರಣದಲ್ಲಿ ತಮ್ಮನ್ನು ದೋಷಿ ಎಂದು ಘೋಷಿಸಿ ವಾಗ್ದಂಡನೆಗೆ ಶಿಫಾರಸು ಮಾಡಿರುವ ಸುಪ್ರೀಂ ಕೋರ್ಟ್‌ನ ಆಂತರಿಕ ವಿಚಾರಣಾ ಸಮಿತಿಯ ವರದಿಯನ್ನು ಅಮಾನ್ಯಗೊಳಿಸುವಂತೆ ಕೋರಿ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾ। ಯಶವಂತ್ ವರ್ಮಾ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ನೋಟು ಸಿಕ್ಕ ಪ್ರಕರಣದಲ್ಲಿ ಆಂತರಿಕ ಸಮಿತಿ ನೀಡಿದ ವರದಿ ಆಧಾರದಲ್ಲಿ ತಮ್ಮ ವಿರುದ್ಧ ವಾಗ್ದಂಡನೆ ವಿಧಿಸುವ ಪ್ರಕ್ರಿಯೆ ಆರಂಭಿಸುವಂತೆ ಸರ್ಕಾರ ಹಾಗೂ ರಾಷ್ಟ್ರಪತಿಗಳನ್ನು ಕೋರಿದ್ದ ಹಿಂದಿನ ಸುಪ್ರೀಂ ಕೋರ್ಟ್ ನ್ಯಾ। ಸಂಜೀವ್ ಖನ್ನಾ ಅವರ ಮೇ 8ರಂ ಶಿಫಾರಸ್ಸನ್ನು ವಜಾಗೊಳಿಸುವಂತೆಯೂ ವರ್ಮಾ ಮನವಿ ಮಾಡಿದ್ದಾರೆ.
ಜು.21ರಂದು ಆರಂಭವಾಗಲಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ನ್ಯಾ.ವರ್ಮಾ ಅವರ ವಿರುದ್ಧ ವಾಗ್ದಂಡನೆ ಮೂಲಕ ವಜಾ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಸಹಜ ನ್ಯಾಯಪಾಲನೆಯಾಗಿಲ್ಲ:
ಆಂತರಿಕ ಸಮಿತಿಯು ಪೂರ್ವಕಲ್ಪಿತ ವಿಚಾರಗಳನ್ನು ಆಧರಿಸಿ ನನ್ನ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಿದೆ. ನೈಸರ್ಗಿಕ ನ್ಯಾಯ ಕಡೆಗಣಿಸಿ ತ್ವರಿತವಾಗಿ ಆಂತರಿಕ ತನಿಖೆ ನಡೆಸಲಾಗಿದೆ ಎಂದು ಜ.ವರ್ಮಾ ಆರೋಪಿಸಿದ್ದಾರೆ. ಈ ಅರ್ಜಿಯ ವಿಚಾರಣೆ ದಿನಾಂಕ ಇನ್ನಷ್ಟೇ ನಿಗದಿಯಾಗಬೇಕಿದೆ.
ಕಳೆದ ಮಾರ್ಚ್‌ನಲ್ಲಿ ನ್ಯಾ.ವರ್ಮಾ ಅವರ ದೆಹಲಿಯ ನಿವಾಸದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ತೆರಳಿದ್ದ ಅಗ್ನಿಶಾಮಕದಳದವರಿಗೆ ಆ ಸಂದರ್ಭದಲ್ಲಿ ಸುಟ್ಟ ಸ್ಥಿತಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾಗಿದ್ದವು. ಈ ಕುರಿತ ವಿಡಿಯೋ ವೈರಲ್ ಆಗಿ ಅದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.
;Resize=(690,390))
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))