ಸಾರಾಂಶ
ನವದೆಹಲಿ: ಸದನದಲ್ಲಿ ಪ್ರಶ್ನೆ ಕೇಳಲು ಹಣ ಪಡೆದಿದ್ದ ಆರೋಪ ಎದುರಿಸುತ್ತಿರುವ ಲೋಕಸಭಾ ಸಂಸದೆ ಮಹುವಾ ಮೊಯಿತ್ರಾ ಮತ್ತು ಉದ್ಯಮಿ ದರ್ಶನ್ ಹೀರಾನಂದಾನಿ ವಿರುದ್ಧ ಕೇಂದ್ರ ತನಿಖಾ ಸಂಸ್ಥೆ ಲೋಕಪಾಲಕ್ಕೆ ವರದಿ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೊಯಿತ್ರಾ ಮತ್ತು ಹೀರಾನಂದಾನಿ ವಿರುದ್ಧ ಮಾ.21ರಂದು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಸಿಬಿಐ, ಅದರ ವರದಿಯನ್ನು ಸಲ್ಲಿಕೆ ಮಾಡಿದೆ. ಇದರ ಆಧಾರದಲ್ಲಿ ಲೋಕಪಾಲ ಮುಂದಿನ ಕ್ರಮ ಕೈಗೊಳ್ಳಲಿದೆ.
ಪ್ರಕರಣವೇನು?:
ಕೃಷ್ಣಾನಗರ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು, ಉದ್ಯಮಿಯಾಗಿದ್ದ ದರ್ಶನ್ ಹೀರಾನಂದಾನಿಯವರಿಂದ ಹಣ ಪಡೆದು, ಅವರ ಪ್ರತಿಸ್ಪರ್ಧಿ ಅದಾನಿ ಸಮೂಹದ ವಿರುದ್ಧ ಪ್ರಶ್ನೆ ಕೇಳಿದ್ದರು ಎಂದು 2013ರ ಅಕ್ಟೋಬರ್‌ನಲ್ಲಿ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆರೋಪಿಸಿದ್ದರು.
ಇದರ ಬೆನ್ನಲ್ಲೇ, ಡಿಸೆಂಬರ್‌ನಲ್ಲಿ ಮೊಯಿತ್ರಾರನ್ನು ಲೋಕಸಭೆಯಿಂದ ವಜಾಗೊಳಿಸಲಾಗಿತ್ತು. ಬಳಿಕ 2024ರ ಚುನಾವಣೆಯಲ್ಲಿ ವಿಜಯಿಯಾಗಿ ಮೊಯಿತ್ರಾ ಮತ್ತೆ ಲೋಕಸಭೆ ಪ್ರವೇಶಿಸಿದ್ದರು.