ದೇಶದಲ್ಲಿ ಹಲವೆಡೆ ಮಾರಾಟ ಮಾಡಲಾಗುತ್ತಿರುವ ಪವಿತ್ರ ಗಂಗಾ ಜಲದ ಮೇಲೆ ಯಾವುದೇ ತರಹದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಹೇರಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ನವದೆಹಲಿ: ದೇಶದಲ್ಲಿ ಹಲವೆಡೆ ಮಾರಾಟ ಮಾಡಲಾಗುತ್ತಿರುವ ಪವಿತ್ರ ಗಂಗಾ ಜಲದ ಮೇಲೆ ಯಾವುದೇ ತರಹದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಹೇರಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಗಂಗಾ ಜಲದ ಮೇಲೆ ಶೇ.18 ಜಿಎಸ್‌ಟಿ ಹೇರಿಕೆ ಮಾಡಲಾಗಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟ್ವೀಟರ್‌ನಲ್ಲಿ ಗುರುವಾರ ಬೆಳಗ್ಗೆ ಆರೋಪ ಮಾಡಿದ್ದರು. ಇದಕ್ಕೆ ಉತ್ತರಿಸಿರುವ ಕೇಂದ್ರೀಯ ಪರೋಕ್ಷ ತೆರಿಗೆ ಮಂಡಳಿ, ‘ಗಂಗಾ ಜಲ ಎಂಬುದು ಪೂಜಾ ಸಾಮಾಗ್ರಿಗಳ ಪಟ್ಟಿಗೆ ಸೇರುತ್ತದೆ. ಪೂಜಾ ಸಾಮಾಗ್ರಿಗಳಿಗೆ ಜಿಎಸ್‌ಟಿ ಇರುವುದಿಲ್ಲ ಎಂದು 14 ಹಾಗೂ 15ನೇ ಜಿಎಸ್‌ಟಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಹಾಗಾಗಿ ಗಂಗಾಜಲದ ಮೇಲೆ ಜಿಎಸ್‌ಟಿ ಹೇರಿಕೆ ಮಾಡಿಲ್ಲ’ ಎಂದು ಸ್ಪಷ್ಟನೆ ನೀಡಿದೆ.