ಸಾರಾಂಶ
ತೀವ್ರ ಆರ್ಥಿಕ ನಷ್ಟಕ್ಕೆ ಸಿಲುಕಿ ಖಾಸಗೀಕರಣದ ಹೊಸ್ತಿಲಲ್ಲಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆಗೆ ಕೇಂದ್ರ ಸರ್ಕಾರ 11,440 ಕೋಟಿ ರು. ಪುನಶ್ಚೇತನ ಪ್ಯಾಕೇಜ್ ನೀಡಲು ನಿರ್ಧರಿಸಿದೆ.
ನವದೆಹಲಿ: ತೀವ್ರ ಆರ್ಥಿಕ ನಷ್ಟಕ್ಕೆ ಸಿಲುಕಿ ಖಾಸಗೀಕರಣದ ಹೊಸ್ತಿಲಲ್ಲಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆಗೆ ಕೇಂದ್ರ ಸರ್ಕಾರ 11,440 ಕೋಟಿ ರು. ಪುನಶ್ಚೇತನ ಪ್ಯಾಕೇಜ್ ನೀಡಲು ನಿರ್ಧರಿಸಿದೆ.
ಕೇಂದ್ರದ ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಶುಕ್ರವಾರ ಈ ವಿಷಯ ಪ್ರಕಟಿಸಿ, ‘ಇದು ಐತಿಹಾಸಿಕ ನಿರ್ಧಾರ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಇದು ಸಾಧ್ಯವಾಗಿದೆ. ದೇಶೀಯ ಉಕ್ಕು ಕ್ಷೇತ್ರಕ್ಕೆ ಶಕ್ತಿ ತುಂಬುವ ದಿಟ್ಟ ಹೆಜ್ಜೆ ಇದಾಗಿದೆ’ ಎಂದರು.ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಟ್ವೀಟ್ ಮಾಡಿ, ‘ಆತ್ಮನಿರ್ಭರ ಭಾರತಕ್ಕೆ ಇದು ನೆರವಾಗಲಿದೆ’ ಎಂದು ಹರ್ಷಿಸಿದ್ದಾರೆ.
7.5 ದಶಲಕ್ಷ ಟನ್ ಸಾಮರ್ಥ್ಯದ ವಿಶಾಖಪಟ್ಟಣ ಉಕ್ಕು ಕಾರ್ಖಾನೆ ಹಲವು ವರ್ಷಗಳಿಂದ ಆರ್ಥಿಕ ಸಮಸ್ಯೆ ಎದುರಿಸುತ್ತಿದೆ ಸುಮಾರು 36 ಸಾವಿರ ಕೋಟಿ ರು. ಬಾಕಿಯನ್ನು ಕಾರ್ಖಾನೆ ಉಳಿಸಿಕೊಂಡಿದೆ.