ಸಾರಾಂಶ
ಈರುಳ್ಳಿ ಬೆಲೆ ಮತ್ತೆ ಗಗನಮುಖಿಯಾದ ಬೆನ್ನಲ್ಲೇ ದೇಶದ ಹಲವು ಪ್ರಮುಖ ನಗರಗಳಲ್ಲಿ ಕೆಜಿಗೆ 24 ರು.ನಂಗೆ ಸಬ್ಸಿಡಿ ದರದಲ್ಲಿ ಈರುಳ್ಳಿ ಮಾರಾಟಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ.
ನವದೆಹಲಿ: ಈರುಳ್ಳಿ ಬೆಲೆ ಮತ್ತೆ ಗಗನಮುಖಿಯಾದ ಬೆನ್ನಲ್ಲೇ ದೇಶದ ಹಲವು ಪ್ರಮುಖ ನಗರಗಳಲ್ಲಿ ಕೆಜಿಗೆ 24 ರು.ನಂಗೆ ಸಬ್ಸಿಡಿ ದರದಲ್ಲಿ ಈರುಳ್ಳಿ ಮಾರಾಟಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಗುರುವಾರದಿಂದಲೇ ದೆಹಲಿ, ಮುಂಬೈ ಮತ್ತು ಅಹಮದಾಬಾದ್‌ನಲ್ಲಿ ಸಬ್ಸಿಡಿ ದರದಲ್ಲಿ ಮಾರಾಟ ಆರಂಭವಾಗಿದೆ. ದಿಲ್ಲಿಯಲ್ಲಿ ಸಬ್ಸಿಡಿ ಈರುಳ್ಳಿ ಮಾರಾಟಕ್ಕೆ ಹಸಿರು ನಿಶಾನೆ ತೋರಿ ಮಾತನಾಡಿದ ಕೇಂದ್ರ ಆಹಾರ ಸಚಿವ ಪ್ರಲ್ಹಾದ್ ಜೋಶಿ, ‘ ಬಫರ್ ಸ್ಟಾಕ್‌ನಿಂದ ಸುಮಾರು 25 ಟನ್ ಈರುಳ್ಳಿಯನ್ನು ದೆಹಲಿ, ಮುಂಬೈ ಮತ್ತು ಅಹಮದಾಬಾದ್‌ನಲ್ಲಿ ನಾಫೆಡ್. ಎನ್‌ಸಿಸಿಎಫ್ ಮತ್ತು ಕೇಂದ್ರೀಯ ಭಂಡಾರದ ಮೂಲಕ ಮಾರಲಾಗುತ್ತದೆ. ಚಿಲ್ಲರೆ ಮಾರಾಟ ಬೆಲೆ 30 ರು.ಗಿಂತ ಹೆಚ್ಚಿರುವ ಸ್ಥಳಗಳಲ್ಲಿ ಈರುಳ್ಳಿಯನ್ನು ಕೇಜಿಗೆ 24 ರು.ನಂತೆ ಮಾರಾಟ ಮಾಡಲಾಗುವುದು’ ಎಂದರು. ಸಬ್ಸಿಡಿ ಮಾರಾಟ ಶುಕ್ರವಾರದಿಂದ ಚೆನ್ನೈ, ಗುವಾಹಟಿ, ಕೋಲ್ಕತಾಗೆ ವಿಸ್ತರಣೆ ಆಗಲಿದ್ದು, ಡಿಸೆಂಬರ್ ತನಕವೂ ಮುಂದುವರೆಯಲಿದೆ.