ಸಾರಾಂಶ
ಚಂದ್ರನ ದಕ್ಷಿಣ ಧ್ರುವದ ಮೇಲೆ ಯಶಸ್ವಿಯಾಗಿ ನೌಕೆ ಇಳಿಸಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ‘ಚಂದ್ರಯಾನ -3’ ತಂಡಕ್ಕೆ ಅಮೆರಿಕದ ಪ್ರತಿಷ್ಠಿತ ಜಾನ್ ಎಲ್. ಜಾಕ್ ಸ್ವಿಗೆರ್ಟ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ವಾಷಿಂಗ್ಟನ್: ಚಂದ್ರನ ದಕ್ಷಿಣ ಧ್ರುವದ ಮೇಲೆ ಯಶಸ್ವಿಯಾಗಿ ನೌಕೆ ಇಳಿಸಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ‘ಚಂದ್ರಯಾನ -3’ ತಂಡಕ್ಕೆ ಅಮೆರಿಕದ ಪ್ರತಿಷ್ಠಿತ ಜಾನ್ ಎಲ್. ಜಾಕ್ ಸ್ವಿಗೆರ್ಟ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಬಾಹ್ಯಾಕಾಶ ಸಂಶೋಧನೆಯ ಸ್ತರವನ್ನು ಇನ್ನಷ್ಟು ಹೆಚ್ಚಿಸುವ ಮೂಲಕ ಇತರರಿಗೆ ಪ್ರೇರಣೆಯಾಗಿದ್ದಕ್ಕೆ ಇಸ್ರೋಗೆ ಈ ಪ್ರಶಸ್ತಿ ನೀಡಲಾಗಿದೆ. ಬಾಹ್ಯಾಕಾಶದಲ್ಲಿ ಭಾರತದ ನಾಯಕತ್ವ ಇಡೀ ಜಗತ್ತಿಗೆ ಸ್ಪೂರ್ತಿ ಎಂದು ಸಂಸ್ಥೆ ಇಸ್ರೋ ಸಾಧನೆಯನ್ನು ಹೊಗಳಿದೆ.
ಮಂಗಳವಾರ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತೀಯ ದೂತಾವಾಸ ಕಚೇರಿಯ ಹಿರಿಯ ಅಧಿಕಾರಿ ಡಿ.ಸಿ.ಮಂಜುನಾಥ್, ಇಸ್ರೋ ಪರವಾಗಿ ಈ ಪ್ರಶಸ್ತಿ ಸ್ವೀಕರಿಸಿದರು. ಚಂದ್ರನ ದಕ್ಷಿಣ ಧ್ರುವದ ಮೇಲೆ ನೌಕೆ ಇಳಿಸಿದ ಮೊದಲ ದೇಶ ಎಂಬ ಹಿರಿಮೆಗೆ ಭಾರತಕ್ಕಿದೆ.