ಸಾರಾಂಶ
6000 ಕೋಟಿ ರು. ಮೌಲ್ಯದ ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣಕ್ಕೆ ಸಂಬಂಧಿಸಿದಂತೆ ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ಸಿಗ ಭೂಪೇಶ್ ಬಾಘೇಲ್ ವಿರುದ್ಧ ಆರ್ಥಿಕ ಅಪರಾಧಗಳ ವಿಭಾಗ ಪ್ರಕರಣ ದಾಖಲಿಸಿದೆ.
ಪಿಟಿಐ, ರಾಯಪುರ6000 ಕೋಟಿ ರು. ಮೌಲ್ಯದ ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣಕ್ಕೆ ಸಂಬಂಧಿಸಿದಂತೆ ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ಸಿಗ ಭೂಪೇಶ್ ಬಾಘೇಲ್ ವಿರುದ್ಧ ಆರ್ಥಿಕ ಅಪರಾಧಗಳ ವಿಭಾಗ ಪ್ರಕರಣ ದಾಖಲಿಸಿದೆ. ರಾಜನಂದಗಾಂವ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಬಾಘೇಲ್ ಹಾಗೂ ಅವರ ಪಕ್ಷಕ್ಕೆಈ ಬೆಳವಣಿಗೆಯಿಂದ ಹೊಸ ಸಂಕಷ್ಟ ಎದುರಾಗಿದೆ.ಕಳೆದ ಒಂದು ವರ್ಷದಿಂದ ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ.) ತನಿಖೆ ನಡೆಸುತ್ತಿತ್ತು. ಆ್ಯಪ್ ಸೃಷ್ಟಿಕರ್ತರು ಛತ್ತೀಸ್‌ಗಢ ಮೂಲದವರಾಗಿದ್ದು, ಇದೇ ರಾಜ್ಯದ ಅತ್ಯುನ್ನತ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿತ್ತು. ಅಲ್ಲದೆ ಈ ಸಂಬಂಧ ಛತ್ತೀಸ್‌ಗಢದ ಆರ್ಥಿಕ ಅಪರಾಧಗಳ ವಿಭಾಗಕ್ಕೆ ವರದಿಯನ್ನೂ ಕೊಟ್ಟಿತ್ತು. ಅದರ ಆಧಾರದಲ್ಲಿ ಇದೀಗ ಬಾಘೇಲ್ ಸೇರಿ ವಿವಿಧ ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.