ಚೀನಾ ವಿದೇಶಾಂಗ ಸಚಿವ ವಾಂಗ್ ಇಂದು ಭಾರತಕ್ಕೆ

| N/A | Published : Aug 18 2025, 12:00 AM IST

ಚೀನಾ ವಿದೇಶಾಂಗ ಸಚಿವ ವಾಂಗ್ ಇಂದು ಭಾರತಕ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಎರಡು ದಿನಗಳ ಭೇಟಿಗಾಗಿ ಸೋಮವಾರ ಭಾರತಕ್ಕೆ ಆಗಮಿಸಲಿದ್ದಾರೆ. ಉಭಯ ದೇಶಗಳ ನಡುವಿನ ಗಡಿ ಸಮಸ್ಯೆ ಇತ್ಯರ್ಥಕ್ಕೆ ಸಂಬಂಧಿಸಿದಂತೆ ಈ ಭೇಟಿ ನಡೆಯುತ್ತಿದೆ ಎಂದು ಎರಡೂ ದೇಶಗಳು ಹೇಳಿವೆ.

ನವದೆಹಲಿ: ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಎರಡು ದಿನಗಳ ಭೇಟಿಗಾಗಿ ಸೋಮವಾರ ಭಾರತಕ್ಕೆ ಆಗಮಿಸಲಿದ್ದಾರೆ. ಉಭಯ ದೇಶಗಳ ನಡುವಿನ ಗಡಿ ಸಮಸ್ಯೆ ಇತ್ಯರ್ಥಕ್ಕೆ ಸಂಬಂಧಿಸಿದಂತೆ ಈ ಭೇಟಿ ನಡೆಯುತ್ತಿದೆ ಎಂದು ಎರಡೂ ದೇಶಗಳು ಹೇಳಿವೆ.

ಆದರೆ ಅಮೆರಿಕದ ತೆರಿಗೆ ದಾಳಿಯಿಂದ ಆಕ್ರೋಶಗೊಂಡಿರುವ ಭಾರತ, ಚೀನಾ, ರಷ್ಯಾ ಒಂದಾಗುತ್ತಿವೆ ಎಂಬ ವರದಿಗಳ ಬೆನ್ನಲ್ಲೇ ಮತ್ತು ಭಾರತದ ಪ್ರಧಾನಿ ಮೋದಿ ಚೀನಾ ಭೇಟಿಗೂ ಮುನ್ನ ವಾಂಗ್‌ ಆಗಮನ ಸಾಕಷ್ಟು ಕುತೂಹಲ ಮೂಡಿಸಿದೆ.

ಈ ಭೇಟಿ ವೇಳೆ ಗಡಿ ನಿಯಂತ್ರಣ ರೇಖೆಯುದ್ದಕ್ಕೂ (ಎಲ್‌ಎಸಿ) ಇರುವ ಸದ್ಯದ ಪರಿಸ್ಥಿತಿ ಸಂಬಂಧ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರೊಂದಿಗೆ ವಾಂಗ್‌ ಚರ್ಚೆ ನಡೆಸಲಿದ್ದಾರೆ.

2020ರ ಗಲ್ವಾನ್ ಸಂಘರ್ಷದ ಬಳಿಕ ಚೀನಾ ಹಾಗೂ ಭಾರತದ ನಡುವಿನ ಸಂಬಂಧ ಸಂಪೂರ್ಣ ಹಳಸಿತ್ತು. ಇದೀಗ ಎರಡೂ ದೇಶಗಳು ಪರಸ್ಪರ ವಿಶ್ವಾಸವೃದ್ಧಿಯ ಹಲವು ಕ್ರಮಗಳನ್ನು ಕೈಗೊಂಡಿದ್ದು ಅದರ ಬೆನ್ನಲ್ಲೇ ವಾಂಗ್‌ ಆಗಮನವಾಗುತ್ತಿದೆ.

Read more Articles on