ಸಾರಾಂಶ
ಚುನಾವಣೆ ಘೋಷಣೆಯಾದ ಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಸರ್ಕಾರದ ಹಲವು ಕಾರ್ಯಚಟುವಟಿಕೆಗಳ ಮೇಲೆ ನಿಗಾ ವಹಿಸಲಾಗುತ್ತದೆ.
ನವದೆಹಲಿ: ಲೋಕಸಭೆ ಚುನಾವಣೆ ಶನಿವಾರ ಸಂಜೆ ಘೋಷಣೆಯಾಗಿದ್ದು, ತಕ್ಷಣದಿಂದಲೇ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ.
ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿರುವ ಕಾರಣ ಸರ್ಕಾರಗಳು ಯಾವುದೇ ನೀತಿ ನಿರ್ಧಾರ ಕೈಗೊಳ್ಳುವುದರ ಮೇಲೆ ನಿರ್ಬಂಧ ಬೀಳಲಿದೆ.
ಕೆಲವು ತುರ್ತು ವಿಚಾರಗಳ ನಿರ್ಣಯಗಳನ್ನು ಹೊರತು ಪಡಿಸಿದರೆ ಮತದಾರರ ಮೇಲೆ ಪರಿಣಾಮ ಬೀರುವಂತಹ ಯಾವುದೇ ನೀತಿ ನಿರ್ಧಾರಕ ವಿಷಯಗಳ ಬಗ್ಗೆ ತೀರ್ಮಾನ ಕೈಗೊಳ್ಳಲು ಸರ್ಕಾರಗಳಿಗೆ ಅವಕಾಶವಿಲ್ಲ.
ಇನ್ನುಳಿದಂತೆ ಟೀವಿ, ದೈನಿಕ, ವಿದ್ಯನ್ಮಾನ ಹಾಗೂ ಸಾಮೂಹಿಕ ಮಾಧ್ಯಮಗಳಲ್ಲಿ ಪ್ರಕಟವಾಗುವ ಜಾಹೀರಾತುಗಳಿಗೆ ಚುನಾವಣಾ ಆಯೋಗದ ಪೂರ್ವಾನುಮತಿ ಅಗತ್ಯವಾಗಿರುತ್ತದೆ.
;Resize=(128,128))
;Resize=(128,128))
;Resize=(128,128))
;Resize=(128,128))