ಸಾರಾಂಶ
ನಟ ಅಮಿತಾಭ್ ಬಚ್ಚನ್ ಶುಕ್ರವಾರ ದಿಢೀರ್ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ವೇಳೆ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಮುಂಬೈ: ನಟ ಅಮಿತಾಭ್ ಬಚ್ಚನ್ ಶುಕ್ರವಾರ ದಿಢೀರ್ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ವೇಳೆ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಆದರೆ ಈ ಕುರಿತು ಅವರ ಕುಟುಂಬವಾಗಲೀ ಅಥವಾ ಬಚ್ಚನ್ ದಾಖಲಾಗಿದ್ದ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಾಗಲೀ ಯಾವುದೇ ಮಾಹಿತಿ ನೀಡಿಲ್ಲ.
ಶುಕ್ರವಾರ ಮಧ್ಯಾಹ್ನದಿಂದಲೇ ಈ ಕುರಿತು ಎಕ್ಸ್‌ನಲ್ಲಿ ಹಲವು ಚರ್ಚೆಗಳು ನಡೆದಿದ್ದು, ಕೆಲವರು ತಮ್ಮ ಕಾಲಿನ ಬಳಿ ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆ ಮಾಡಿಕೊಳ್ಳಲು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿಸಿದ್ದರೆ ಮತ್ತೂ ಕೆಲವರು ಹೃದಯ ಬ್ಲಾಕ್ ಆಗಿರುವ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಗುರುವಾರವಷ್ಟೇ ತಮ್ಮ ಪುತ್ರ ಅಭಿಷೇಕ್ ಒಡೆತನದ ಐಎಸ್‌ಪಿಎಲ್ ತಂಡಕ್ಕೆ ಹುರಿದುಂಬಿಸುವ ಸಲುವಾಗಿ ನಗರದ ಕ್ರೀಡಾಂಗಣದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರುವ ವಿಡಿಯೋ ವೈರಲ್ ಆಗಿತ್ತು.