ಆಂಧ್ರಪ್ರದೇಶದ ಕಡಪಾ ಲೋಕಸಭಾ ಕ್ಷೇತ್ರದಿಂದ ಆಂಧ್ರದ ಮುಖ್ಯಮಂತ್ರಿ ವೈ.ಎಸ್‌. ಜಗನ್‌ ಮೋಹನ್‌ ರೆಡ್ಡಿ ತಂಗಿ ಹಾಗೂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷೆ ವೈ.ಎಸ್‌. ಶರ್ಮಿಳಾ ಕಣಕ್ಕಿಳಿಯಲಿದ್ದಾರೆ.

ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ 17 ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಆಂಧ್ರಪ್ರದೇಶದ ಕಡಪಾ ಲೋಕಸಭಾ ಕ್ಷೇತ್ರದಿಂದ ಆಂಧ್ರದ ಮುಖ್ಯಮಂತ್ರಿ ವೈ.ಎಸ್‌. ಜಗನ್‌ ಮೋಹನ್‌ ರೆಡ್ಡಿ ತಂಗಿ ಹಾಗೂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷೆ ವೈ.ಎಸ್‌. ಶರ್ಮಿಳಾ ಕಣಕ್ಕಿಳಿಯಲಿದ್ದಾರೆ.

ಒಡಿಶಾದಿಂದ ಎಂಟು, ಆಂಧ್ರಪ್ರದೇಶದಿಂದ ಐದು, ಬಿಹಾರದಿಂದ ಮೂರು ಹಾಗೂ ಪಶ್ಚಿಮ ಬಂಗಾಳದಿಂದ ಒಬ್ಬ ಅಭ್ಯರ್ಥಿ ಸೇರಿದಂತೆ ಒಟ್ಟು 17 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಬಿಹಾರದ ಕಿಶನ್‌ಗಂಜ್ ಲೋಕಸಭಾ ಕ್ಷೇತ್ರದಿಂದ ಮೊಹಮ್ಮದ್‌ ಜಾವೇದ್‌, ಕತಿಹಾರ್‌ನಿಂದ ತಾರಿಕ್ ಅನ್ವರ್, ಭಾಗಲ್ಪುರ್‌ನಿಂದ ಶಾಸಕ ಅಜೀತ್ ಶರ್ಮಾ, ಆಂಧ್ರಪ್ರದೇಶದ ಕಾಕಿನಾಡದಿಂದ ಕೇಂದ್ರ ಸಚಿವ ಎಂ.ಎಂ.ಪಲ್ಲಂ ರಾಜು ಅವರನ್ನು ಪಕ್ಷ ಕಣಕ್ಕಿಳಿಸಿದೆ. ಕಾಂಗ್ರೆಸ್‌ ಇದುವರೆಗೂ ಒಟ್ಟು 228 ಅಭ್ಯರ್ಥಿಗಳನ್ನು ಘೋಷಿಸಿದೆ.