ಲೋಕಸಭೆಯಲ್ಲಿ ಡಾ. ಬಿ.ಆರ್‌. ಅಂಬೇಡ್ಕರ್‌ ಅವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜೀನಾಮೆಗೆ ಆಗ್ರಹಿಸುತ್ತಿರುವ ಕಾಂಗ್ರೆಸ್‌ ಸರ್ಕಾರ ‘ಜೈ ಬಾಪು, ಜೈ ಭೀಮ್‌, ಜೈ ಸಂವಿಧಾನ’ ಚಳವಳಿ ಘೋಷಿಸಿದೆ.

ನವದೆಹಲಿ: ಲೋಕಸಭೆಯಲ್ಲಿ ಡಾ. ಬಿ.ಆರ್‌. ಅಂಬೇಡ್ಕರ್‌ ಅವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜೀನಾಮೆಗೆ ಆಗ್ರಹಿಸುತ್ತಿರುವ ಕಾಂಗ್ರೆಸ್‌ ಸರ್ಕಾರ ‘ಜೈ ಬಾಪು, ಜೈ ಭೀಮ್‌, ಜೈ ಸಂವಿಧಾನ’ ಚಳವಳಿ ಘೋಷಿಸಿದೆ.

‘ಜ.3ರಂದು ಶುರುವಾಗಿರುವ ಈ ಚಳವಳಿಯು ಜ.26ರಂದು ಅಂಬೇಡ್ಕರ್‌ ಜನ್ಮಸ್ಥಳವಾದ ಮಧ್ಯಪ್ರದೇಶದ ಮಹುನಲ್ಲಿ ಭವ್ಯ ರ್‍ಯಾಲಿಯೊಂದಿಗೆ ಸಂಪನ್ನಗೊಳ್ಳಲಿದೆ. ಇದರ ಭಾಗವಾಗಿ ಕಾಂಗ್ರೆಸ್‌ ನಾಯಕರು ಪ್ರತಿ ಗ್ರಾಮಗಳಲ್ಲಿ ಸಭೆ ನಡೆಸಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಅಂಬೇಡ್ಕರ್‌ ಹಾಗೂ ಸಂವಿಧಾನವನ್ನು ಅವಮಾನಿಸುತ್ತಿರುವ ಬಗ್ಗೆ ತಿಳಿಸುತ್ತೇವೆ’ ಎಂದು ಕಾಂಗ್ರೆಸ್‌ ನಾಯಕ ಪವನ್‌ ಖೇರಾ ಹೇಳಿದ್ದಾರೆ.

ಜತೆಗೆ, 2025ರ ಜ.26ರಿಂದ 2026ರ ಜ.26ರ ವರೆಗೆ ಒಗ್ಗಟ್ಟು ಹಾಗೂ ಸಾಮಾಜಿಕ ನ್ಯಾಯದ ಸಂದೇಶ ಸಾರುವ ನಿಟ್ಟಿನಲ್ಲಿ ‘ಸಂವಿದಾನ ಬಚಾವೋ ರಾಷ್ಟ್ರೀಯ ಪಾದಯಾತ್ರೆ’ ನಡೆಸುವುದಾಗಿ ಘೋಷಿಸಿದ್ದಾರೆ.