ಸಾರಾಂಶ
ಕೇರಳದ ಮಾಜಿ ಮುಖ್ಯಮಂತ್ರಿ ಕೆ. ಕರುಣಾಕರನ್ ಪುತ್ರಿ ಪದ್ಮಜಾ ವೇಣುಗೋಪಾಲ್ ಕಾಂಗ್ರೆಸ್ ತೊರೆದು ಗುರುವಾರ ಬಿಜೆಪಿ ಸೇರಿದ್ದಾರೆ.
ನವದೆಹಲಿ: ಕಾಂಗ್ರೆಸ್ ಹಿರಿಯ ಧುರೀಣ, ಕೇರಳದ ಮಾಜಿ ಮುಖ್ಯಮಂತ್ರಿ ಕೆ. ಕರುಣಾಕರನ್ ಪುತ್ರಿ ಪದ್ಮಜಾ ವೇಣುಗೋಪಾಲ್ ಕಾಂಗ್ರೆಸ್ ತೊರೆದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಸಮ್ಮುಖದಲ್ಲಿ ಗುರುವಾರ ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ. ಇದು ಕೇರಳದಲ್ಲಿ ಬಿಜೆಪಿಗೆ ಆನೆಬಲ ತಂದಿದೆ.
ಈ ಬಗ್ಗೆ ಮಾತನಾಡಿದ ಪದ್ಮಜಾ ‘ಕಾಂಗ್ರೆಸ್ ಪಕ್ಷದ ಕುರಿತಾಗಿ ನನಗೆ ಕಳೆದ ವಿಧಾನಸಭಾ ಚುನಾವಣೆಯಿಂದಲೂ ಅಸಮಾಧಾನ ಇತ್ತು. ಹಿರಿಯ ನಾಯಕಿ ಸೋನಿಯಾ ಗಾಂಧಿ ಕುರಿತು ಅಪಾರ ಗೌರವವಿದ್ದರೂ ನನ್ನ ಸಮಸ್ಯೆಗಳನ್ನು ಹೇಳಿಕೊಳ್ಳಲು ಅವರ ಭೇಟಿಗೆ ಅವಕಾಶವನ್ನೇ ನೀಡಲಿಲ್ಲ. ಈ ಹಿನ್ನೆಲೆಯಲ್ಲಿ ಬೇಸತ್ತು ಪಕ್ಷ ತೊರೆದಿದ್ದೇನೆ’ ಎಂದರು.