ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿಕೆ ಪ್ರಸ್ತಾಪಿಸಿದ ರಿಜಿಜು ವಿರುದ್ಧ ಕಾಂಗ್ರೆಸ್ ಹಕ್ಕುಚ್ಯುತಿ

| N/A | Published : Mar 25 2025, 12:45 AM IST / Updated: Mar 25 2025, 04:31 AM IST

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿಕೆ ಪ್ರಸ್ತಾಪಿಸಿದ ರಿಜಿಜು ವಿರುದ್ಧ ಕಾಂಗ್ರೆಸ್ ಹಕ್ಕುಚ್ಯುತಿ
Share this Article
  • FB
  • TW
  • Linkdin
  • Email

ಸಾರಾಂಶ

 ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಮುಸ್ಲಿಂ ಮೀಸಲಿಗಾಗಿ ಸಂವಿಧಾನ ಬದಲಿಸಲಾಗುವುದು ಎಂದಿದ್ದಾರೆ. ಇದು ಖಂಡನಾರ್ಹ. ಸಾಂವಿಧಾನಿಕ ಹುದ್ದೆಯಲ್ಲಿ ಇರುವ ವ್ಯಕ್ತಿಯ ಈ ಹೇಳಿಕೆಯನ್ನು ಲಘುವಾಗಿ ಪರಿಗಣಿಸಲು ಆಗದು -  ಕೇಂದ್ರ ಸಚಿವ ಕಿರಣ್‌ ರಿಜಿಜು  

ನಬದೆಹಲಿ: ‘ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಮುಸ್ಲಿಂ ಮೀಸಲಿಗಾಗಿ ಸಂವಿಧಾನ ಬದಲಿಸಲಾಗುವುದು ಎಂದಿದ್ದಾರೆ. ಇದು ಖಂಡನಾರ್ಹ. ಸಾಂವಿಧಾನಿಕ ಹುದ್ದೆಯಲ್ಲಿ ಇರುವ ವ್ಯಕ್ತಿಯ ಈ ಹೇಳಿಕೆಯನ್ನು ಲಘುವಾಗಿ ಪರಿಗಣಿಸಲು ಆಗದು’ ಎಂದು ರಾಜ್ಯಸಭೆಯಲ್ಲಿ ಹೇಳಿದ್ದ ಕೇಂದ್ರ ಸಚಿವ ಕಿರಣ್‌ ರಿಜಿಜು ವಿರುದ್ಧ ಕಾಂಗ್ರೆಸ್ ಪಕ್ಷ ಹಕ್ಕುಚ್ಯುತಿ ನಿರ್ಣಯ ಮಂಡಿಸುವುದಾಗಿ ಹೇಳಿದೆ.

‘ಡಿಕೆಶಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ. ಖುದ್ದು ಶಿವಕುಮಾರ್‌ ಆ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೂ ರಿಜಿಜು ಅವರು ತಿರುಚಿದ ಹೇಳಿಕೆ ನೀಡಿ ಸದನದ ದಿಕ್ಕು ತಪ್ಪಿಸಿದ್ದಾರೆ. ಹೀಗಾಗಿ ಇದು ಹಕ್ಕುಚ್ಯುತಿಗೆ ಅರ್ಹವಾದ ಪ್ರಕರಣ’ ಎಂದು ಕಾಂಗ್ರೆಸ್‌ ಸಂಸದ ಜೈರಾಂ ರಮೇಶ್‌ ಹಕ್ಕುಚ್ಯುತಿ ನೋಟಿಸ್‌ ನೀಡಿದ್ದಾರೆ.