ಸಾರಾಂಶ
‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬುಲ್ಡೋಜರ್‌ನಿಂದ ರಾಮಮಂದಿರವನ್ನು ನೆಲಸಮಗೊಳಿಸಲಾಗುತ್ತದೆ’ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿದೆ.
ನವದೆಹಲಿ: ‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬುಲ್ಡೋಜರ್‌ನಿಂದ ರಾಮಮಂದಿರವನ್ನು ನೆಲಸಮಗೊಳಿಸಲಾಗುತ್ತದೆ’ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿದೆ.
ಟ್ರಸ್ಟ್ ವತಿಯಿಂದ ನಿರ್ಮಾಣ ವಾಗಿರುವ ದೇವಾಲಯದ ವಿಚಾರದಲ್ಲಿ ಬಿಜೆಪಿ ಮತ್ತು ಮೋದಿ ಈ ರೀತಿ ಹೇಳಿಕೆಯನ್ನು ನೀಡುವುದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
ಈ ರೀತಿ ಹೇಳಿಕೆಗಳನ್ನು ನೀಡುವದರಿಂದ ಜನರು ಆಕ್ರೋಶಗೊಳ್ಳುತ್ತಾರೆ. ಪ್ರಚೋದನೆಗೊಳ್ಳುತ್ತಾರೆ. ಸಣ್ಣ ನಾಯಕರು ಈ ರೀತಿ ಹೇಳಿದ್ದರೆ ಗಮನ ಸೆಳೆಯುತ್ತಿರಲಿಲ್ಲ. ಪ್ರಧಾನಿಯ ಹುದ್ದೆಯಲ್ಲಿ ಕುಳಿತು ಮೋದಿಯವರೇ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಕಾಂಗ್ರೆಸ್ ಒತ್ತಾಯಿಸಿದೆ.