ಸಾರಾಂಶ
ಎಸ್‌ಸಿ, ಎಸ್ಟಿ ಮತ್ತು ಹಿಂದುಳಿದ ವರ್ಗಗಳಿಗೆ ನೀಡಿರುವ ಮೀಸಲು ರದ್ದುಪಡಿಸಿ, ಅವರನ್ನು ದುರ್ಬಲಗೊಳಿಸಲು ಕಾಂಗ್ರೆಸ್‌ನ ಶೆಹಜಾದಾ (ರಾಹುಲ್ ಗಾಂಧಿ)ಪಿತೂರಿ ನಡೆಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಗಂಭೀರ ಆರೋಪ ಮಾಡಿದ್ದಾರೆ.
ಸಾರಠ್: ಎಸ್‌ಸಿ, ಎಸ್ಟಿ ಮತ್ತು ಹಿಂದುಳಿದ ವರ್ಗಗಳಿಗೆ ನೀಡಿರುವ ಮೀಸಲು ರದ್ದುಪಡಿಸಿ, ಅವರನ್ನು ದುರ್ಬಲಗೊಳಿಸಲು ಕಾಂಗ್ರೆಸ್‌ನ ಶೆಹಜಾದಾ (ರಾಹುಲ್ ಗಾಂಧಿ)ಪಿತೂರಿ ನಡೆಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಗಂಭೀರ ಆರೋಪ ಮಾಡಿದ್ದಾರೆ.
ಜಾರ್ಖಂಡ್‌ನಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಪ್ರಧಾನಿ, ‘ಎಸ್‌ಸಿ, ಎಸ್ಟಿ, ಒಬಿಸಿ ಮೀಸಲು ತೆಗೆಯಲು ಯಾರೇ ಪಿತೂರಿ ನಡೆಸಿದರೂ ಅಂತಹ ಪ್ರಯತ್ನವನ್ನು ವಿಫಲಗೊಳಿಸುತ್ತೇವೆ. ಕಾಂಗ್ರೆಸ್ ಅಪಾಯಕಾರಿ ಉದ್ದೇಶವನ್ನು ಹೊಂದಿದೆ.
ಕಾಂಗ್ರೆಸ್‌ನ ಶೆಹಜಾದಾ, ಎಸ್‌ಸಿ, ಎಸ್ಟಿ ಮತ್ತು ಹಿಂದುಳಿದ ವರ್ಗಗಳ ಮೀಸಲಾತಿ ತೆಗೆಯಲು ಪಿತೂರಿ ನಡೆಸುತ್ತಿದ್ದಾರೆ. ಯುವರಾಜನ ತಂದೆ ಮೀಸಲಾತಿಯು ಗುಲಾಮಗಿರಿ, ಜೀತದಾಳು ಎಂದು ಘೋಷಿಸಿದ್ದರು. ಬಳಿಕ ಅವರು ಚುನಾವಣೆಯಲ್ಲಿ ಸೋತಿದ್ದರು. ಅವರ ತಂದೆ ಮೀಸಲಾತಿ ತೆಗೆದುಹಾಕುವ ಬಗ್ಗೆ ಜಾಹೀರಾತು ಪ್ರಕಟಿಸಿದ್ದರು. ನಾವು ಅಂತಹ ಯಾವುದೇ ಪಿತೂರಿಗಳಿದ್ದರೂ ಅದನ್ನು ವಿಫಲಗೊಳಿಸುತ್ತೇವೆ’ ಎಂದರು.