ಮೋದಿ ಜೊತೆ ಮುಖಾಮುಖಿ ಚರ್ಚೆಗೆ ರೆಡಿ: ರಾಹುಲ್‌

| Published : May 12 2024, 01:17 AM IST / Updated: May 12 2024, 07:21 AM IST

ಸಾರಾಂಶ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಸಾರ್ವತ್ರಿಕವಾಗಿ ಮುಖಾಮುಖಿ ಚರ್ಚೆ ನಡೆಸಬೇಕೆಂಬ ಸಲಹೆಯನ್ನು ರಾಹುಲ್‌ ಒಪ್ಪಿಕೊಂಡಿದ್ದಾರೆ.

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಸಾರ್ವತ್ರಿಕವಾಗಿ ಮುಖಾಮುಖಿ ಚರ್ಚೆ ನಡೆಸಬೇಕೆಂಬ ಸಲಹೆಯನ್ನು ರಾಹುಲ್‌ ಒಪ್ಪಿಕೊಂಡಿದ್ದಾರೆ. 

ಒಂದು ವೇಳೆ ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯೂ ಸಮ್ಮತಿಸಿದರೆ ಐತಿಹಾಸಿಕ ಘಟನೆಯೊಂದಕ್ಕೆ ದೇಶ ಸಾಕ್ಷಿಯಾಗಲಿದೆ.ಈ ಕುರಿತು ‘ಎಕ್ಸ್‌’ನಲ್ಲಿ ಪ್ರತಿಕ್ರಿಯೆ ನೀಡಿರುವ ರಾಹುಲ್‌, ‘ಈ ಉಪಕ್ರಮವನ್ನು ಕಾಂಗ್ರೆಸ್‌ ಸ್ವಾಗತಿಸುತ್ತದೆ ಮತ್ತು ಚರ್ಚೆಯ ಕುರಿತಾದ ಆಹ್ವಾನವನ್ನು ಸ್ವೀಕರಿಸುತ್ತದೆ. 

ಪ್ರಧಾನಿ ನರೇಂದ್ರ ಮೋದಿ ಕೂಡಾ ಈ ಚರ್ಚೆಯ ಆಹ್ವಾನ ಸ್ವೀಕರಿಸುತ್ತಾರೆ ಎಂದು ದೇಶ ಬಯಸುತ್ತದೆ’ ಎಂದು ಹೇಳಿದ್ದಾರೆ.ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಮದನ್‌ ಬಿ.ಲೋಕೂರ್‌, ದೆಹಲಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅಜಿತ್‌ ಪಿ.ಶಾ ಮತ್ತು ಹಿಂದೂ ಪತ್ರಿಕೆಯ ನಿವೃತ್ತ ಸಂಪಾದಕ ಎನ್‌.ರಾಮ್‌, ಮೋದಿ ಮತ್ತು ರಾಹುಲ್‌ ಮುಖಾಮುಖಿ ಚರ್ಚೆಗೆ ಸಲಹೆ ನೀಡಿ ಪತ್ರ ಬರೆದಿದ್ದರು.