ಸಾರಾಂಶ
ಕಾಂಗ್ರೆಸ್ ಮತ್ತು ಇಂಡಿಯಾ ಕೂಟ ಮಣಿಪುರದ ಕೋಮು ಸಂಘರ್ಷದ ಬಗ್ಗೆ ಸಂಸತ್ತಿನಲ್ಲಿ ಪ್ರಸ್ತಾಪಿಸಲಿದೆ. ಸಂಘರ್ಷವನ್ನು ಕೊನೆಗಾಣಿಸಿ ಶಾಂತಿ ಸ್ಥಾಪಿಸಲು ಸರ್ಕಾರದ ಮೇಲೆ ಒತ್ತಡ ಹೇರಲಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತಿಳಿಸಿದರು.
ನವದೆಹಲಿ: ಕಾಂಗ್ರೆಸ್ ಮತ್ತು ಇಂಡಿಯಾ ಕೂಟ ಮಣಿಪುರದ ಕೋಮು ಸಂಘರ್ಷದ ಬಗ್ಗೆ ಸಂಸತ್ತಿನಲ್ಲಿ ಪ್ರಸ್ತಾಪಿಸಲಿದೆ. ಸಂಘರ್ಷವನ್ನು ಕೊನೆಗಾಣಿಸಿ ಶಾಂತಿ ಸ್ಥಾಪಿಸಲು ಸರ್ಕಾರದ ಮೇಲೆ ಒತ್ತಡ ಹೇರಲಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತಿಳಿಸಿದರು.
ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಿದ ಹಲವು ದಿನಗಳ ನಂತರ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರಕ್ಕೆ ಭೇಟಿ ನೀಡಿ ಶಾಂತಿ ಕಾಪಾಡುವಂತೆ ಮನವಿ ಮಾಡಬೇಕು ಎಂದು ಪುನರುಚ್ಚರಿಸಿದರು.
ಈ ಬಗ್ಗೆ ತಮ್ಮ ಟ್ವೀಟರ್‌ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿರುವ ರಾಹುಲ್, ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಪರಿಸ್ಥಿತಿಗಳು ಇದುವರೆಗೂ ಸುಧಾರಣೆಯಾಗಿಲ್ಲ. ಅನೇಕ ಮನೆಗಳು ಸುಟ್ಟುಹೋಗುತ್ತಿವೆ. ಅಮಾಯಕರ ಜೀವಗಳು ಅಪಾಯದಲ್ಲಿವೆ. ಸಾವಿರಾರು ಕುಟುಂಬಗಳು ಪರಿಹಾರ ಶಿಬಿರಗಳಲ್ಲಿ ಜೀವನ ನಡೆಸುತ್ತಿವೆ. ಈ ಎಲ್ಲಾ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಿ ಮಣಿಪುರದಲ್ಲಿ ಶಾಂತಿ ಸ್ಥಾಪಿಸಲು ಸರ್ಕಾರದ ಮೇಲೆ ಒತ್ತಡ ಹಾಕಲಿದ್ದೇನೆ ಎಂದು ಹೇಳಿದ್ದಾರೆ.