ಸಾರಾಂಶ
ಕಾಂಗ್ರೆಸ್ ಈ ಲೋಕಸಭಾ ಚುನಾವಣೆಯಲ್ಲಿ 2019 ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ಈ ಬಾರಿ ಇಂಡಿಯಾ ಒಕ್ಕೂಟ ತಮಿಳುನಾಡು ಮತ್ತು ಕೇರಳದಲ್ಲಿ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಭವಿಷ್ಯ ನುಡಿದಿದ್ದಾರೆ
ಕೋಲ್ಕತಾ: ಕಾಂಗ್ರೆಸ್ ಈ ಲೋಕಸಭಾ ಚುನಾವಣೆಯಲ್ಲಿ 2019 ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ಈ ಬಾರಿ ಇಂಡಿಯಾ ಒಕ್ಕೂಟ ತಮಿಳುನಾಡು ಮತ್ತು ಕೇರಳದಲ್ಲಿ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಭವಿಷ್ಯ ನುಡಿದಿದ್ದಾರೆ.
ಶನಿವಾರ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ತಮಿಳುನಾಡು ಮತ್ತು ಕೇರಳದಲ್ಲಿ ಇಂಡಿಯಾ ಒಕ್ಕೂಟ ಈ ಬಾರಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ಕರ್ನಾಟಕ ಹಾಗೂ ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದು, ಅಲ್ಲಿಯೂ ಅಧಿಕ ಸೀಟುಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತನ್ನ ರಾಜ್ಯದಲ್ಲಿ ಇಂಡಿಯಾ ಒಕ್ಕೂಟ ಗೆಲ್ಲಲು ಶ್ರಮಿಸುತ್ತಿದ್ದು, ಇಂಡಿಯಾ ಒಕ್ಕೂಟಕ್ಕೆ ದೊಡ್ಡ ಶಕ್ತಿಯಾಗಿದ್ದಾರೆ. ಮೋದಿಯನ್ನು ‘ಹಿಂದೂಗಳ ಸಂರಕ್ಷಕ’ ಎಂದು ಬಿಂಬಿಸಲು ಪ್ರತಿಪಕ್ಷವನ್ನು ‘ಹಿಂದೂ ವಿರೋಧಿ’ ಎಂದು ಬಣ್ಣಿಸುವುದು ಬಿಜೆಪಿಯ ಲೆಕ್ಕಾಚಾರದ ತಂತ್ರ ಎಂದು ಹೇಳಿದರು.