ಮಾ.7ಕ್ಕೆ ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ?

| Published : Mar 06 2024, 02:15 AM IST

ಸಾರಾಂಶ

ದೆಹಲಿಯಲ್ಲಿ ಕಾಂಗ್ರೆಸ್‌ ಚುನಾವಣಾ ಸಮಿತಿ ಸಭೆ ಸೇರಲಿದ್ದು, ಆ ಬಳಿಕ ಸುದ್ದಿಗೋಷ್ಠಿ ನಡೆಸಿ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.

ನವದೆಹಲಿ: ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಕಾಂಗ್ರೆಸ್‌ನ ಕೇಂದ್ರೀಯ ಚುನಾವಣಾ ಸಮಿತಿ ಮಾ.7ರಂದು ತನ್ನ ಸಭೆ ನಡೆಡಲಿದೆ.

ಸಭೆ ಬಳಿಕ ಪಕ್ಷದ ಮೊದಲ ಪಟ್ಟಿ ಬಿಡುಗಡೆ ಮಾಡಬಹುದು ಎನ್ನಲಾಗಿದೆ. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್‌ ಕೇಂದ್ರ ಚುನಾವಣೆ ಸಮಿತಿ ಅಧ್ಯಕ್ಷರಾಗಿದ್ದಾರೆ.

ಈ ಸಮಿತಿಯಲ್ಲಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಕೆಸಿ ವೇಣುಗೋಪಾಲ್ ಸಹ ಇದ್ದಾರೆ.

ಈ ಸಮಿತಿಗೆ ರಾಜ್ಯಗಳು ಆಯಾ ಕ್ಷೇತ್ರಗಳಿಗೆ ಟಿಕೆಟ್‌ ನೀಡಬಹುದಾದ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಪಡಿಸಿ ಕಳುಹಿಸಿದೆ.

ಈ ಸಮಿತಿ ಪಟ್ಟಿಯನ್ನು ಪರಾಮರ್ಶೆ ನಡೆಸಿ ಪ್ರಕಟ ಮಾಡಲಿದೆ. ಬಿಜೆಪಿ ಈಗಾಗಲೇ 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.