ಕಾಂಗ್ರೆಸ್‌ ಕರಡು ಪ್ರಣಾಳಿಕೆ ಖರ್ಗೆಗೆ ಸಲ್ಲಿಕೆ

| Published : Mar 07 2024, 01:49 AM IST

ಸಾರಾಂಶ

ಕಾಂಗ್ರೆಸ್‌ ಪ್ರಣಾಳಿಕೆಗೆ ಅಂತಿಮ ರೂಪರೇಷೆ ದೊರೆತ ಹಿನ್ನೆಲೆಯಲ್ಲಿ ಕರಡು ಪ್ರತಿಯನ್ನು ಪಕ್ಷದ ರಾಷ್ಟ್ರಾಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಕೆ ಮಾಡಲಾಗಿದೆ.

ನವದೆಹಲಿ: ಲೋಕಸಭೆ ಚುನಾವಣೆ ಅಂಗವಾಗಿ ಪಕ್ಷದ ಪ್ರಣಾಳಿಕೆ ಸಮಿತಿ ಸಿದ್ಧಪಡಿಸಿರುವ ಕರಡು ಪ್ರಣಾಳಿಕೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬುಧವಾರ ಹಸ್ತಾಂತರ ಮಾಡಲಾಗಿದೆ.

ಕರಡು ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಯುವಕರಿಗೆ ‘ಉದ್ಯೋಗದ ಹಕ್ಕು’ ತರಲಾಗುವುದು.

ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವವರ ವಿರುದ್ಧ ಕಠಿಣ ಕ್ರಮ, ನಿರುದ್ಯೋಗಿಗಳಿಗೆ ಅಪ್ರೆಂಟಿಸ್‌ಶಿಪ್‌ ಘೋಷಣೆ. ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ಮಾನ್ಯತೆ, ದೇಶವ್ಯಾಪಿ ಜಾತಿ ಗಣತಿ, ಸಮಾಜದ ವಿವಿಧ ಸಮುದಾಯಗಳಿಗೆ ಆರ್ಥಿಕ ನೆರವು ನೀಡುವ ಅಂಶಗಳನ್ನು ಪ್ರಸ್ತಾಪಿಸಲಾಗಿದೆ ಎನ್ನಲಾಗಿದೆ.

ಇದನ್ನು ಪಕ್ಷದ ವರಿಷ್ಠರ ಅನುಮೋದನೆ ಬಳಿಕ ಸಿಡಬ್ಲ್ಯುಸಿ ಅನುಮೋದನೆ ಪಡೆದು ನಂತರ ಬಿಡುಗಡೆ ಮಾಡಲಾಗುವುದು.