ಸಾರಾಂಶ
ಸಿಇಸಿ/ ಮೋದಿ ಜೊತೆ ಭಿನ್ನಾಭಿಪ್ರಾಯ, ವೈಯಕ್ತಿಕ ಕಾರಣ ಇಲ್ಲವೇ ಬಿಜೆಪಿ ಟಿಕೆಟ್‌ನಲ್ಲಿ ಲೋಕಸಭೆಗೆ ಸ್ಪರ್ಧೆ ಮಾಡುವ ಮೂರು ಕಾರಣಗಳಲ್ಲೊಂದು ಚುನಾವಣಾ ಆಯುಕ್ತ ಅರುಣ್ ಗೋಯಲ್ ದಿಢೀರ್ ರಾಜೀನಾಮೆ ನೀಡುವಂತೆ ಮಾಡಿದ ಸಂಗತಿ ಎಂದು ಕಿಡಿಕಾರಿದ್ದಾರೆ.
ನವದೆಹಲಿ: ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರ ದಿಢೀರ್ ರಾಜೀನಾಮೆ ಮೂರು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಕಾಂಗ್ರೆಸ್ ಹೇಳಿದೆ ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ‘ರಾಜೀನಾಮೆ ಮೂರು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಮೊದಲನೆಯದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅಥವಾ ಪ್ರಧಾನಿ ಮೋದಿ ಜೊತೆಗಿನ ಭಿನ್ನಾಭಿಪ್ರಾಯ ಕಾರಣವೇ?
ಎರಡನೆಯದ್ದು ಅವರೇ ಪ್ರಸ್ತಾಪಿಸಿರುವಂತೆ ವೈಯಕ್ತಿಕ ಕಾರಣವೇ? ಅಥವಾ ಮೂರನೆಯದಾಗಿ ಪಶ್ಚಿಮ ಬಂಗಾಳ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಅಭಿಜಿತ್ ಗಂಗೂಲಿ ರೀತಿ ಬಿಜೆಪಿ ಟಿಕೆಟ್ ಪಡೆದು ಲೋಕಸಭೆಗೆ ಸ್ಪರ್ಧಿಸಲು ರಾಜೀನಾಮೆ ನೀಡಿದ್ದಾರಾ?’ ಎಂದು ಪ್ರಶ್ನಿಸಿದ್ದಾರೆ.