ಸಾರಾಂಶ
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸುವ ವೈದ್ಯಕೀಯ ಪರೀಕ್ಷೆ ನೀಟ್ ಹಾಗೂ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ನೀಟ್)ಯಲ್ಲಿ ಅಕ್ರಮ ವಿರೋಧಿಸಿ ದೇಶದಾದ್ಯಂತ ಶುಕ್ರವಾರ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸುವ ವೈದ್ಯಕೀಯ ಪರೀಕ್ಷೆ ನೀಟ್ ಹಾಗೂ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ನೀಟ್)ಯಲ್ಲಿ ಅಕ್ರಮ ವಿರೋಧಿಸಿ ದೇಶದಾದ್ಯಂತ ಶುಕ್ರವಾರ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ಎಲ್ಲಾ ರಾಜ್ಯಗಳ ರಾಜಧಾನಿಗಳಲ್ಲಿ ನಡೆದ ಪ್ರತಿಭಟನೆ ವೇಳೆ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷರು, ಸಂಸದರು, ಶಾಸಕರು, ರಾಜ್ಯ ಉಸ್ತುವಾರಿಗಳು ಸೇರಿದಂತೆ ಹಿರಿಯರು ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಈ ವೇಳೆ ಪರೀಕ್ಷೆ ಆಯೋಜಿಸುವಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರಿಸಿದೆ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ. ಬಿಜೆಪಿ ಆಡಳಿತದ ರಾಜ್ಯಗಳಲ್ಲೇ ಹೆಚ್ಚಿನ ಹಗರಣ ನಡೆದಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಜೊತೆಗೆ ಘಟನೆಯಲ್ಲಿ ಭಾಗಿಯಾದವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ನೊಂದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.