ಜಾತಿ ಜನಗಣತಿ, ರೈತ ಸಾಲ ಮನ್ನಾ: ರಾಹುಲ್ ಗಾಂಧಿ ಭರವಸೆ

| Published : Apr 14 2024, 01:46 AM IST / Updated: Apr 14 2024, 07:19 AM IST

Rahul Gandhi
ಜಾತಿ ಜನಗಣತಿ, ರೈತ ಸಾಲ ಮನ್ನಾ: ರಾಹುಲ್ ಗಾಂಧಿ ಭರವಸೆ
Share this Article
  • FB
  • TW
  • Linkdin
  • Email

ಸಾರಾಂಶ

ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣವೇ ಜಾತಿ ಆಧರಿತ ಜನಗಣತಿಯನ್ನು ನಡೆಸಲಾಗುವುದು ಹಾಗೂ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತಿಳಿಸಿದರು.

ಬಸ್ತರ್: ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣವೇ ಜಾತಿ ಆಧರಿತ ಜನಗಣತಿಯನ್ನು ನಡೆಸಲಾಗುವುದು ಹಾಗೂ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತಿಳಿಸಿದರು.

ಛತ್ತೀಸಗಢದ ಬಸ್ತರ್‌ನಲ್ಲಿ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ಸಂವಿಧಾನವನ್ನು ನಾಶ ಮಾಡುವ ಹಾಗೂ ಉಳಿಸಲು ಪ್ರಯತ್ನಿಸುತ್ತಿರುವವರ ನಡುವೆ ನಡೆಯುತ್ತಿರುವ ಯುದ್ಧ. ಈ ಯುದ್ಧದಲ್ಲಿ ಜಯಶೀಲರಾಗಿ ಅಧಿಕಾರ ಚುಕ್ಕಾಣಿ ಹಿಡಿಯಲಿದ್ದೇವೆ ಎಂದರು.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿ, ರಾಮ ಮಂದಿರ ಉದ್ಘಾಟನೆ ವೇಳೆ ಬುಡಕಟ್ಟು ಜನಾಂಗದ ಮಹಿಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಿಲ್ಲ. ಇದು ಮೋದಿ ಸರ್ಕಾರ ಬುಡಕಟ್ಟು ಜನಾಂಗಕ್ಕೆ ಕೊಡುವ ಗೌರವ ಎಂದು ಆರೋಪಿಸಿದರು.