ಮಹಾ ಸ್ಥಳೀಯ ಸಂಸ್ಥೆ ಚುನಾವಣೆಗೆ ಕೈ ಏಕಾಂಗಿ ಸ್ಪರ್ಧೆ ? : ಅಘಾಡಿಗೆ ಪೆಟ್ಟು

| N/A | Published : Jul 07 2025, 11:48 PM IST / Updated: Jul 08 2025, 05:22 AM IST

ಮಹಾ ಸ್ಥಳೀಯ ಸಂಸ್ಥೆ ಚುನಾವಣೆಗೆ ಕೈ ಏಕಾಂಗಿ ಸ್ಪರ್ಧೆ ? : ಅಘಾಡಿಗೆ ಪೆಟ್ಟು
Share this Article
  • FB
  • TW
  • Linkdin
  • Email

ಸಾರಾಂಶ

ಠಾಕ್ರೆ ಸಹೋದರರ ಮೈತ್ರಿಯಿಂದ ಮಹಾರಾಷ್ಟ್ರ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಯಾಗಿರುವ ನಡುವೆಯೇ ಮಹಾರಾಷ್ಟ್ರದಲ್ಲಿ ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್‌ ಏಕಾಂಗಿಯಾಗಿ ಸ್ಪರ್ಧಿಸಬೇಕು ಎನ್ನುವ ಕೂಗು ಪಕ್ಷದಲ್ಲಿಯೇ ಕೇಳಿ ಬಂದಿದೆ.

ಮುಂಬೈ: ಠಾಕ್ರೆ ಸಹೋದರರ ಮೈತ್ರಿಯಿಂದ ಮಹಾರಾಷ್ಟ್ರ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಯಾಗಿರುವ ನಡುವೆಯೇ ಮಹಾರಾಷ್ಟ್ರದಲ್ಲಿ ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್‌ ಏಕಾಂಗಿಯಾಗಿ ಸ್ಪರ್ಧಿಸಬೇಕು ಎನ್ನುವ ಕೂಗು ಪಕ್ಷದಲ್ಲಿಯೇ ಕೇಳಿ ಬಂದಿದೆ.

ಒಂದು ಕಾಲದಲ್ಲಿ ಮಹಾರಾಷ್ಟ್ರದಲ್ಲಿ ಆಡಳಿತ ನಡೆಸಿದ್ದ ಕಾಂಗ್ರೆಸ್‌ ಈಗ ಬಿಜೆಪಿ ಅಲೆಯಿಂದ ತನ್ನ ನೆಲೆ ಕಳೆದುಕೊಂಡಿದೆ. ಕಮಲ ಪಾಳಯದ ವರ್ಚಸ್ಸು ವ್ಯಾಪಕವಾಗಿರುವ ಸ್ಥಳೀಯ ಸಂಸ್ಥೆಗಳನ್ನು ತಮ್ಮ ಅಸ್ತಿತ್ವವನ್ನು ಮರಳಿ ಪಡೆಯಲು ಮತ್ತು ಪಕ್ಷವನ್ನು ಬಲ ಪಡಿಸಲು ಸ್ವತಂತ್ರವಾಗಿ ಸ್ಪರ್ಧಿಸದರೆ ಒಳಿತು ಎಂದು ಪಕ್ಷದ ಹಲವರು ನಾಯಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸದ್ಯ ಮಹಾರಾಷ್ಟ್ರದಲ್ಲಿ ಶರದ್‌ ಪವಾರ್ ಎನ್‌ಸಿಪಿ, ಉದ್ಧವ್‌ ಠಾಕ್ರೆ ಶಿವಸೇನೆ( ಯುಬಿಟಿ) ಒಳಗೊಂಡ ಮಹಾ ವಿಕಾಸ್‌ ಅಘಾಡಿ ಮೈತ್ರಿ ಕೂಟದಲ್ಲಿ ಕಾಂಗ್ರೆಸ್‌ ಇದೆ. ಈ ಕೂಟದಲ್ಲಿ ಆಗಾಗ ಅಸಮಾಧಾನ ಹೊಗೆಯಾಡುತ್ತಲೇ ಇತ್ತು. ಈ ನಡುವೆ ಉದ್ಧವ್‌ ಮತ್ತು ರಾಜ್‌ ಠಾಕ್ರೆ ನಡುವೆ ಏರ್ಪಟ್ಟಿರುವ ಬಾಂಧವ್ಯ ಬಿರುಕನ್ನು ಮತ್ತಷ್ಟು ಹೆಚ್ಚಿಸಿದೆ.

ಹೀಗಾಗಿ ಕಾಂಗ್ರೆಸ್‌ನಲ್ಲಿ ಹೊಸ ಕೂಗು ಕೇಳಿ ಬಂದಿದ್ದು, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಬೇಕು. ಒಂದು ವೇಳೆ ಅನಿವಾರ್ಯ ಪರಿಸ್ಥಿತಿ ಸೃಷ್ಟಿಯಾದರೆ ಚುನಾವಣೆ ನಂತರ ಮೈತ್ರಿ ಮಾಡಿಕೊಳ್ಳಬಹುದು ಎನ್ನುವ ಒತ್ತಾಯ ಪಕ್ಷದ ಹಲವರದ್ದು. ಆದರೆ ಹೈಕಮಾಂಡ್‌ ಇನ್ನು ಯಾವ ನಿರ್ಧಾರ ಕೈಗೊಂಡಿಲ್ಲ.

Read more Articles on